Home ಕ್ರೀಡೆ P.Cricket 'ವಿಶ್ವ' ಗೆದ್ದ ನಾಯಕ ಧೋನಿಗೆ ಬರ್ತ್​ಡೇ ಸಂಭ್ರಮ..!

‘ವಿಶ್ವ’ ಗೆದ್ದ ನಾಯಕ ಧೋನಿಗೆ ಬರ್ತ್​ಡೇ ಸಂಭ್ರಮ..!

ಮಹೇಂದ್ರ ಸಿಂಗ್ ಧೋನಿ… ಭಾರತೀಯ ಕ್ರಿಕೆಟ್​ಗೆ ಹೊಸ ಆಯಾಮ ನೀಡಿದ ಕ್ರಿಕೆಟಿಗ..ಭಾರತಕ್ಕೆ 28 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲಿಸಿಕೊಟ್ಟ ಕೂಲ್ ಕ್ಯಾಪ್ಟನ್. ಐಸಿಸಿಯ 3 ಪ್ರಮುಖ ಟ್ರೋಫಿಗಳನ್ನ ಗೆಲ್ಲಿಸಿಕೊಟ್ಟ ಏಕೈಕ ನಾಯಕ..ಹೀಗೆ ಹಲವು ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಟೀಮ್ಇಂಡಿಯಾ ಮಾಜಿ ನಾಯಕ ಎಮ್ಎಸ್ ಧೋನಿಗಿಂದು ಹುಟ್ಟುಹಬ್ಬದ ಸಂಭ್ರಮ.
 ಜುಲೈ 7, 1981ರಲ್ಲಿ ಜಾರ್ಖಂಡ್​​ನ ಪುಟ್ಟ ಪಟ್ಟಣ ರಾಂಚಿಯಲ್ಲಿ ಹುಟ್ಟಿದ ಧೋನಿ, ಇಂದು (ಜುಲೈ.7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ ಎಮ್ಎಸ್ ಧೋನಿ, ಸದ್ಯ ನಾಯಕತ್ವ ತ್ಯಜಿಸಿ ತಂಡದ ಯುವ ಆಟಗಾರರಿಗೆ ಸಲಹೆಗಾರನಾಗಿ, ಬ್ಯಾಟ್ಸ್​​ಮನ್ ಕಮ್​ ವಿಕೆಟ್​ ಕೀಪರ್​​ ಆಗಿ​ ಮಿಂಚುತ್ತಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಧೋನಿ, ವಿಶ್ವಮಟ್ಟದ ಅತ್ಯುತ್ತಮ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. 2007ರಲ್ಲಿ ನಾಯಕನಾಗಿ ಬಡ್ತಿ ಪಡೆದುಕೊಂಡ ಧೋನಿ, 2014ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇನ್ನು 2016ರ ಅಂತ್ಯದಲ್ಲಿ ಏಕದಿನ ಹಾಗು ಟಿ-ಟ್ವೆಂಟಿ ನಾಯಕತ್ವಕ್ಕೂ ರಾಜೀನಾಮೆ ನೀಡಿ ಅಭಿಮಾನಿಗಳಿಗೆ ಶಾಕ್​ ನೀಡಿದ್ರು.
ಸದ್ಯ ವಿಶ್ವಕಪ್​ ಟೂರ್ನಿಯನ್ನಾಡುತ್ತಿರುವ ಎಮ್​ಎಸ್​​ಡಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಧೋನಿ ಭಾರತದ ಕ್ರಿಕೆಟ್​ಗೆ ಹೊಸ ಭಾಷ್ಯ ಬರೆದ ವ್ಯಕ್ತಿ ಎಂದು ಬಣ್ಣಿಸುವ ಮೂಲಕ ನುಡಿ ನಮನ ಅರ್ಪಿಸಿದೆ.
ಈ ವಿಡಿಯೋದಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್ ಬೂಮ್ರಾ, ಧೋನಿಯೊಂದಿಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಇವರೊಂದಿಗೆ ಇಂಗ್ಲೆಂಡ್ ವಿಕೆಟ್ ಕೀಪರ್ ಜೋಸ್ ಬಟ್ಲರ್, ಆಲ್​ರೌಂಡರ್​ ಬೆನ್ ಸ್ಟೋಕ್ಸ್ ಕೂಡ ಧೋನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಐಸಿಸಿಯ 3 ಪ್ರಮುಖ ಟ್ರೋಫಿಗಳಾದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಪಿಯನ್ನ ಗೆಲ್ಲಿಸಿಕೊಟ್ಟ ವಿಶ್ವದ ಏಕೈಕ ನಾಯಕ ಎನ್ನುವ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್ಲದೇ ಧೋನಿ ನಾಯಕತ್ವದಲ್ಲಿ ಟೀಮ್​ಇಂಡಿಯಾ ಟೆಸ್ಟ್ ಹಾಗೂ ಏಕದಿನ ಎರಡೂ ಮಾದರಿಯ ರ‍್ಯಾಂಕಿಂಗ್ ನಲ್ಲಿ ಮೊದಲ ಬಾರಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದೆ.
 ಧೋನಿ ನಾಯಕತ್ವದಲ್ಲಿ ಟಿ-20 ವಿಶ್ವಕಪ್!
2007ರಲ್ಲಿ ನಡೆದ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನ ಮುನ್ನಡೆಸಿದ ಧೋನಿ, ಚುಟುಕು ಕ್ರಿಕೆಟ್ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ರು.. ಈ ಮೂಲಕ ನಾಯಕನಾಗಿ ಮೊದಲ ಅಗ್ನಿಪರೀಕ್ಷೆಯಲ್ಲೇ ಧೋನಿ ಅದ್ಬುತ ಯಶಸ್ಸು ಸಾಧಿಸಿದ್ರು.
28 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್!
2011ರ ವಿಶ್ವಕಪ್ ಟೂರ್ನಿಯಲ್ಲಿ ಧೋನಿ ನೇತೃತ್ವದ ಟೀಮ್ಇಂಡಿಯಾ ಅದ್ಬುತ ಪ್ರದರ್ಶನ ನೀಡಿ ಫೈನಲ್ ತಲುಪಿತ್ತು. ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಶ್ರೀಲಂಕಾ ತಂಡವನ್ನ ಮಣಿಸಿ, 2ನೇ ಬಾರಿಗೆ ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು.
2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಕಿರೀಟ!
2013ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ಇಂಡಿಯಾ, ಐತಿಹಾಸಿಕ ಸಾಧನೆ ಮಾಡಿತು. ಇಂಗ್ಲೆಂಡ್ ತಂಡವನ್ನ ಬಗ್ಗುಬಡಿದು ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಈ ಮೂಲಕ ಧೋನಿ ಐಸಿಸಿಯ ಮೂರು ಪ್ರತಿಷ್ಠಿತ ಟ್ರೋಫಿ ಗೆದ್ದ ವಿಶ್ವದ ಏಕೈಕ ನಾಯಕ ಅನ್ನೋ ಹೆಗ್ಗಳಿಕೆಗೂ ಪಾತ್ರರಾದ್ರು.
ಐಸಿಸಿ ಟೂರ್ನಿ ಮಾತ್ರವಲ್ಲ, ದ್ವಿಪಕ್ಷೀಯ ಟೂರ್ನಿಗಳಲ್ಲೂ ಎಮ್ಎಸ್ ಧೋನಿ ಯಶಸ್ಸು ಸಾಧಿಸಿದ್ದಾರೆ. 2016ರ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ- ಟ್ವೆಂಟಿ ಸರಣಿ ಗೆದ್ದ ಧೋನಿ, ಏಷ್ಯಾಕಪ್ ಟ್ರೋಫಿ ಗೆದ್ದು ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ರು.
ಹಲವು ಏಳು ಬೀಳುಗಳನ್ನ ಕಂಡಿರುವ ಎಮ್ಎಸ್ ಧೋನಿ, ಸಾಕಷ್ಟು ಟೀಕೆಗೂ ಗುರಿಯಾಗಿದ್ದಾರೆ. ಈ ವಿಶ್ವಕಪ್​ ಟೂರ್ನಿಯ ಬಳಿಕ ಧೋನಿ ನಿವೃತ್ತಿ ಹೊಂದುತ್ತಾರೆ ಅನ್ನೋ ಸುದ್ದಿಯೂ ಹರಿದಾಡ್ತಾ ಇದೆ.
ವಿಶ್ವದ ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನ ಗಿಟ್ಟಿಸಿಕೊಂಡಿರುವ ಎಮ್ಎಸ್ ಧೋನಿ ಇದೀಗ, ತಮ್ಮ ಮೌಲ್ಯಯುತ ಸಲಹೆ ಸೂಚನೆಗಳ ಮೂಲಕ ಟೀಮ್​ಇಂಡಿಯಾಗೆ ನೆರವಾಗ್ತಾ ಇದ್ದಾರೆ. ಭಾರತೀಯ ಕ್ರಿಕೆಟ್​ಗೆ ಹೊಸ ದಿಕ್ಕನ್ನ ತೋರಿಸಿದ ಮಿಸ್ಟರ್​ ಕೂಲ್​​ಗೆ ಹುಟ್ಟು ಹಬ್ಬದ ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments