Home ರಾಜ್ಯ ಬೆಂಗಳೂರು ರಾಷ್ಟ್ರಗೀತೆಗೆ ಅವಮಾನ: ಟೆಕ್ಕಿ ಅರೆಸ್ಟ್​

ರಾಷ್ಟ್ರಗೀತೆಗೆ ಅವಮಾನ: ಟೆಕ್ಕಿ ಅರೆಸ್ಟ್​

ಬೆಂಗಳೂರು: ರಾಷ್ಟ್ರಗೀತೆಗೆ ಅವಮಾನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮಾಲ್​ ಒಂದರಲ್ಲಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಬೆಂಗಳೂರು ಮೂಲದ ಇಂಜಿನಿಯರ್​ ಜತಿನ್ ಅವೆಂಜರ್ಸ್​ ಚಿತ್ರ ವೀಕ್ಷಣೆಗೆ ಆಗಮಿಸಿದ್ದರು. ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆಗೆ ಎದ್ದು ನಿಲ್ಲದೆ ಅಗೌರವ ತೋರಿಸಿದ್ದಾರೆ.

ಪಕ್ಕದ ಸೀಟ್​ನಲ್ಲಿದ್ದ ಸುರೇಶ್​ ಕುಮಾರ್ ಜತಿನ್​​ಗೆ ಎದ್ದು ನಿಲ್ಲುವಂತೆ ಕೇಳಿದ್ದರು. ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೆಂಬ ನಿಯಮ ಇಲ್ಲ ಎಂದು ಜತಿನ್​  ವಾದಿಸಿದ್ದರು. ರಾಷ್ಟ್ರಗೀತೆಗೆ ಅವಮಾನ ಮಾಡಿದ ಜತಿನ್​ ವಿರುದ್ಧ ಸುರೇಶ್​ ಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದು, ಅಶೋಕ್​ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ. ರಾಷ್ಟ್ರೀಯ ಭಾವನೆಗೆ ಅಗೌರವ ತೋರಿದ್ದಕ್ಕೆ ಜತಿನ್​ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಜತಿನ್​ನನ್ನು ಬಂಧಿಸಿದ್ದಾರೆ. ಕೆಲ ಹೊತ್ತಿನಲ್ಲೇ ಜತಿನ್ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments