ಮಂಡ್ಯ : ಪ್ರವಾಸಿ ಮಂದಿರದಲ್ಲಿ ಇಂದು KRS ಉಳಿಸಿ ಜನಾಂದೋಲನ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಎಲ್ಲಾ ಸಂಘಟನೆಗಳು ಜುಲೈ 29ರಂದು ಮಂಡ್ಯ ನಗರವನ್ನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದವು.
ಜಿಲ್ಲೆಯಲ್ಲಿ ಅದರಲ್ಲೂ ಕೆ.ಆರ್.ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ನೀಡಿದೆ. ಆದರೂ ಸರ್ಕಾರ ಮತ್ತು ಜಿಲ್ಲಾಡಳಿತ ಗಣಿ ಮಾಲೀಕರ ಪ್ರಭಾವಕ್ಕೆ ಮಣಿದು ಗಣಿಗಾರಿಕೆಗೆ ಅನುಮತಿ ನೀಡುತ್ತಲೇ ಬಂದಿವೆ.
ಕಲ್ಲು ಗಣಿಗಾರಿಕೆಗೆ ನಿಷೇಧಿತ ಸ್ಫೋಟಕಗಳು ಹಾಗೂ ಮೆಗ್ಗರ್ ಬ್ಲಾಸ್ಟ್ ನಿಂದ ಬಂಡೆಗಳನ್ನು ಸಿಡಿಸುತ್ತಿರೋದು ಕನ್ನಂಬಾಡಿ ಅಣೆಕಟ್ಟೆಯ ಅವನತಿಗೆ ಕಾರಣವಾಗಿದೆ. ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾದರೆ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರಿಗೆ ದೊಡ್ಡ ಜಲ ಗಂಡಾಂತರ ಎದುರಾಗಲಿದೆ.
ಹಾಗಾಗಿ, ಕೆ.ಆರ್.ಎಸ್ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಕಲ್ಲು ಗಣಿಗಾರಿಕೆಯನ್ನ ಸಂಪೂರ್ಣವಾಗಿ ನಿಷೇಧಿಸಬೇಕು. ಆ ಮೂಲಕ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆ ಉಳಿಸಬೇಕು ಎಂದು ಒತ್ತಾಯಿಸಿ ಮಂಡ್ಯ ಬಂದ್ ಕರೆ ನೀಡಲಾಗಿದೆ. ಅಂದು ಮಂಡ್ಯ ನಗರವನ್ನ ಸಂಪೂರ್ಣ ಬಂದ್ ಮಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಾಂಪ್ರದಾಯಿಕವಾಗಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಜುಲೈ 29 ಮಂಡ್ಯ ಬಂದ್..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


