Home uncategorized ಮಂಗಳೂರಿನಲ್ಲಿ ಪಿಎಫ್ಐ ಕಾರ್ಯಕರ್ತರಿಂದ ಮಾದರಿ ಕಾರ್ಯ

ಮಂಗಳೂರಿನಲ್ಲಿ ಪಿಎಫ್ಐ ಕಾರ್ಯಕರ್ತರಿಂದ ಮಾದರಿ ಕಾರ್ಯ

ಮಂಗಳೂರು :  ಕೋವಿಡ್ ಸೋಂಕಿತರ ಮೃತದೇಹಗಳನ್ನು ಅಮಾನವೀಯವಾಗಿ ಅಂತ್ಯ ಕ್ರಿಯೆ ನಡೆಸುವ ಘಟನೆಗಳ ಮಧ್ಯೆ ಮಂಗಳೂರಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಮಾದರಿಯಾಗಿದ್ದಾರೆ. ಗೌರವಪೂರ್ವಕವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಪಿಎಫ್ಐ ಕಾರ್ಯಕರ್ತರು ಅಂತ್ಯ ಸಂಸ್ಕಾರ ನಡೆಸುತ್ತಿದ್ದು ಗಮನಸೆಳೆಯುತ್ತಿದೆ. ಆರೋಗ್ಯ ಇಲಾಖೆಯಿಂದ ತರಬೇತಿ ಪಡೆದಿರುವ ಪಿಎಫ್ಐ ಸಂಘಟನೆ ಕಾರ್ಯಕರ್ತರು ಪರಿಪೂರ್ಣ ಧಾರ್ಮಿಕ ವಿಧಿ ವಿಧಾನ ಪೂರ್ಣಗೊಳಿಸಿ ಪಾರ್ಥಿವ ಶರೀರವನ್ನ ದಫನ ಮಾಡುತ್ತಾರೆ. ಅಲ್ಲದೇ ಕಾರ್ಯಕರ್ತರು ಸಂಪೂರ್ಣ ಮೈಮುಚ್ಚುವ ಪಿಪಿಇ ಕಿಟ್ ಧರಿಸಿ ಶವ ಸಂಸ್ಕಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಮೃತರಾದ 8 ಮಂದಿ ಮುಸ್ಲಿಂ ವ್ಯಕ್ತಿಗಳ ಮೃತದೇಹಗಳನ್ನ ಮಂಗಳೂರು ನಗರದ ವಿವಿಧ ಮಸೀದಿಗಳ ಖಬರ್​ಸ್ಥಾನಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ .

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments