ಮಂಗಳೂರು : ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನು ತಿಳಿಯುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ.
ಕಲ್ಲು ತೂರಾಟ ನಡೆಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿ, ಶಸ್ತ್ರಾಗಾರದಲ್ಲಿದ್ದ ಶವಗಳನ್ನು ಹೊರ ತೆಗೆಯಲು ಗೋಡೆ ಒಡೆಯಲು ಮುಂದಾದ ಪ್ರತಿಭಟನೆಕಾರರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದಕ್ಕೆ ಕೆಲ ನಾಯಕರುಗಳು ವಿರೋಧ ವ್ಯಕ್ತಪಡಿಸಿ ದುರುದ್ದೇಶದಿಂದಲೇ ಗೋಲಿಬಾರ್ ಮಾಡಲಾಗಿದೆ ಎಂದು ಪ್ರಕರಣದ ತನಿಖೆ ಮಾಡಿಸುವಂತೆ ಆಗ್ರಹಿಸಿದ್ದರು.
ಇದಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸತ್ಯಾಸತ್ಯತೆಯನ್ನು ತಿಳಿಯಲು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಮುಂದಾಗಿದ್ದಾರೆ.