Home ರಾಜ್ಯ ವಿದ್ಯುತ್​ ತಂತಿ ತಗುಲಿ ಬೈಕ್ ಸಮೇತ ಸವಾರ ಸಜೀವ ದಹನ

ವಿದ್ಯುತ್​ ತಂತಿ ತಗುಲಿ ಬೈಕ್ ಸಮೇತ ಸವಾರ ಸಜೀವ ದಹನ

ದಕ್ಷಿಣ ಕನ್ನಡ : ವಿದ್ಯುತ್ ತಂತಿ ತಗುಲಿ ಬೈಕ್ ಸವಾರ ತನ್ನ ಬೈಕ್ ಸಮೇತ ಸಜೀವ ದಹನವಾದ ಘಟನೆ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಂಜದ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಮಂಡೆಕೋಲು ನಿವಾಸಿ ಉಮೇಶ್ (36) ಮೃತ ದುರ್ದೈವಿ. ಬೆಳಿಗ್ಗೆ 5.30 ಗಂಟೆ ಸಮಯಕ್ಕೆ ಘಟನೆ ನಡೆದಿದ್ದು, ಉಮೇಶ್ ಬಳ್ಪದಿಂದ ಮಂಡೆಕೋಲು ಹೋಗುತ್ತಿರುವ ಸಮಯದಲ್ಲಿ ಅಪಘಾತ ಸಂಭವಿಸಿದೆ. 

ಉಮೇಶ್ ಎಲೆಕ್ಟ್ರಿಕಲ್ ವೈರಿಂಗ್ ವೃತ್ತಿ ಮಾಡುತ್ತಿದ್ದರು. ನಾಲ್ಕು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ಇಂದು ಪತ್ನಿ ಮನೆಯಿಂದ ವಾಪಾಸ್ ಆಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. 

ಸುಳ್ಯ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬಗಳು ರಸ್ತೆ ಪಕ್ಕವೇ ಇದ್ದರೂ, ಅದಕ್ಕೆ ಯಾವುದೇ ರೀತಿಯ ರಕ್ಷಾಕವಚಗಳಾಗಲಿ ಇಲ್ಲ. ಇಲ್ಲವೇ ಹಳೆ ತಂತಿ ಬದಲಿಸದೇ ಇರೋದರಿಂದ ಈ ದುರ್ಘಟನೆ ನಡೆದಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಅಲ್ಲದೆ ವಿದ್ಯುತ್ ತಂತಿ ತುಂಡರಿದು ಬಿದ್ದಾಗ ಟ್ರಿಪ್ ಆಗಬೇಕಿತ್ತಾದರೂ, ಅದು ಕೆಲಸ ಮಾಡಿಲ್ಲ ಅನ್ನೋದು ಸಾರ್ವಜನಿಕರ ಅಭಿಪ್ರಾಯ. ಘಟನೆ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-ಇರ್ಷಾದ್ ಕಿನ್ನಿಗೋಳಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments