Home ರಾಜ್ಯ ಗೋಲಿಬಾರ್ ಪ್ರಕರಣ : ಮ್ಯಾಜಿಸ್ಟೀರಿಯಲ್ ತನಿಖೆಯ ಅಂತಿಮ ವಿಚಾರಣೆ!

ಗೋಲಿಬಾರ್ ಪ್ರಕರಣ : ಮ್ಯಾಜಿಸ್ಟೀರಿಯಲ್ ತನಿಖೆಯ ಅಂತಿಮ ವಿಚಾರಣೆ!

ಮಂಗಳೂರು: ಮಂಗಳೂರಿನಲ್ಲಿ 2019 ಡಿಸೆಂಬರ್ 19 ರಂದು ನಡೆದ ಗೋಲಿಬಾರ್ ಪ್ರಕರಣದ ಮ್ಯಾಜಿಸ್ಟೀರಿಯಲ್ ತನಿಖೆಯ ಅಂತಿಮ ವಿಚಾರಣೆ ಇಂದು (ಸೆಪ್ಟೆಂಬರ್ 1) ನಡೆಯಲಿದೆ.
ಮಂಗಳೂರು ಗೋಲಿಬಾರ್ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಂಗಳೂರು ಮಿನಿವಿಧಾನಸೌಧದಲ್ಲಿರುವ ಸಹಾಯಕ ಆಯುಕ್ತರ ಕೋರ್ಟ್ ಹಾಲ್‌ ನಲ್ಲಿ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ನೀಡಲಾಗಿದೆ. ಇದರ ಬಳಿಕ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. 

ಮಂಗಳೂರು ಪೊಲೀಸ್ ಕಮಿಷನರೇಟ್  ವ್ಯಾಪ್ತಿಯಲ್ಲಿ 2019 ಡಿಸೆಂಬರ್ 19 ರಂದು NRC ವಿರುದ್ದ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿದ್ದು ಈ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಇವರನ್ನು ನೇಮಿಸಿ ಸರಕಾರ ಆದೇಶಿಸಿತ್ತು. ಕಳೆದ ಎಪ್ರಿಲ್ ತಿಂಗಳಿನಲ್ಲಿಯೇ ವಿಚಾರಣೆ ಅಂತಿಮಗೊಳ್ಳಬೇಕಿತ್ತಾದರೂ ಕೊರೋನಾ ಲಾಕ್​ಡೌನ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಅಂತಿಮ ವಿಚಾರಣೆ ಇಂದು ನಡೆಯಲಿದೆ. ಈಗಾಗಲೇ ಹಲವು ಸುತ್ತಿನ ವಿಚಾರಣೆಯಲ್ಲಿ ಸಾರ್ವಜನಿಕರು, ಪೊಲೀಸ್ ಅಧಿಕಾರಿಗಳ ಸಹಿತ 350 ಕ್ಕೂ ಅಧಿಕ ಮಂದಿಯಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

– ಇರ್ಷಾದ್ ಕಿನ್ನಿಗೋಳಿ

LEAVE A REPLY

Please enter your comment!
Please enter your name here

- Advertisment -

Most Popular

‘ಮಾನವೀಯತೆ ಮೆರೆದ ಶಾಸಕ ಪ್ರಸಾದ ಅಬ್ಬಯ್ಯ’

ಹುಬ್ಬಳ್ಳಿ: ಇಂದು ಬೆಳ್ಳಂಬೆಳಿಗ್ಗೆ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನ ಮಂದಿರದ ಪಕ್ಕದ ಉದ್ಯಾನವನದಲ್ಲಿ ನಡೆದ ಘಟನೆಯೊಂದು ಶಾಸಕ ಪ್ರಸಾದ ಅಬ್ಬಯ್ಯ ಅವರ ಮಾನವೀಯ ಕಾರ್ಯಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ ಉದ್ಯಾನವನದಲ್ಲಿ ಶಾಸಕರು ವಾಕಿಂಗ್ ಮಾಡುತ್ತಿದ್ದ...

ರೋಡ್ ಮೇಲೆ ಅಡುಗೆ ಮಾಡ್ತಿದ್ದೀವಿ…ಗ್ಯಾಸ್ ಬೆಲೆ ಕಡಿಮೆ ಮಾಡ್ರಿ..!

ಹುಬ್ಬಳ್ಳಿ: ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಹು-ಧಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ರಸ್ತೆಯಲ್ಲಿಯೇ ಕಟ್ಟಿಗೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಹಳೇ ಹುಬ್ಬಳ್ಳಿಯ ಇಂಡಿ ಪಂಪ...

ಎಮ್ಮೆ ಕೊರಳಿಗೆ ಪ್ರಧಾನಿ ಮೋದಿ ಭಾವಚಿತ್ರ ಯಡಿಯೂರಪ್ಪನವರ ಶವಯಾತ್ರೆ

ಗದಗ: ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ನೂರಾರು ಟ್ರ್ಯಾಕ್ಟರ್ ಹಾಗೂ ಬೈಕ್ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿದ‌ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ...

ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಲಾಗುತ್ತಿದೆ: ಬ್ರಹ್ಮಾನಂದ ಸ್ವಾಮೀಜಿ

ಕಾರವಾರ : ನಮ್ಮ ಮಂತ್ರಿಗಳು ರಾಜೀನಾಮೆ ನೀಡಿದರೆ ಸರ್ಕಾರ ದುರ್ಬಲವಾಗುತ್ತದೆ ಎಂದು ಯಡಿಯೂರಪ್ಪನವರನ್ನ ಗೊಂದಲಕ್ಕೀಡು ಮಾಡಿ ನಿದ್ರೆ ಬರದಂತೆ ಮಾಡಿದ್ದಾರೆ ಅಂತಾ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಂಚಮಸಾಲಿ ವಿರುದ್ಧ...

Recent Comments