Saturday, October 1, 2022
Powertv Logo
Homeದೇಶಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೇ ರಾಜೀನಾಮೆ ನೀಡುತ್ತಿದ್ದರು : ರಾಹುಲ್ ಗಾಂಧಿ

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೇ ರಾಜೀನಾಮೆ ನೀಡುತ್ತಿದ್ದರು : ರಾಹುಲ್ ಗಾಂಧಿ

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈಗಿನಂತೆ ಭಾರತ-ಚೀನಾ ಗಡಿ ಸಮಸ್ಯೆ ಇದ್ದಿದ್ದರೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಭಾರತ-ಚೀನಾ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ಚೀನಾವು ಭಾರತದ ಭೂಮಿಯನ್ನು ಅಕ್ರಮಿಸಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ ಚೀನಾ, ಭಾರತದ ಹಲವು ಪ್ರದೇಶಗಳನ್ನು ವಶಪಡಿಸಿಕೊಂಡರೂ ಮೋದಿ ಸುಮ್ಮನಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisment -

Most Popular

Recent Comments