ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 64ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ, ಕೊರೋನಾ ವಿರುದ್ಧ ಹೋರಾಡಲು ಜನರಿಗೆ ಕರೆ ನೀಡಿದ್ದಾರೆ. ಅಲ್ಲದೆ ಕೊರೋನಾ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬರೂ ಸೈನಿಕರು ಎಂದಿದ್ದಾರೆ.
ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ‘ಕೊರೋನಾ ವಿರುದ್ಧ ಜನರೇ ಹೋರಾಡಬೇಕು. ಅದನ್ನು ತಡೆಯುವ ಸಾಮರ್ಥ್ಯ ಅವರ ಕೈಯಲ್ಲೇ ಇದೆ. ಕೊರೋನಾ ವಿರುದ್ಧ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸೋಣ. ಈ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ವ್ಯಕ್ತಿಯೂ ವಾರಿಯರ್ಸ್ಗಳೇ ಎಂದಿದ್ದಾರೆ. ಹಾಗಾಗಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದರು.
ಕೋವಿಡ್-19 ಸೋಂಕನ್ನು ಮಣಿಸಲು ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಆದರೆ ಯಾವುದೇ ಕಾರಣಕ್ಕೂ ಆಯುರ್ವೇದವನ್ನು ನಿರ್ಲಕ್ಷ್ಯ ಮಾಡಬೇಡಿ. ಹಾಗೆಯೇ ಕೊರೋನಾದಿಂದ ತಪ್ಪಿದಸಿಕೊಳ್ಳಲು ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಈ ಕೊರೋನಾ ವೈರಸ್ನಿಂದಾಗಿ ನಮ್ಮ ಸಮಾಜ ಬದಲಾಗಿದೆ. ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದೇವೆ. ಜನರ ಜೀವನ ಶೈಲಿಯಲ್ಲೂ ಅನೇಕ ಬದಲಾವಣೆಯಾಗಿದೆ. ಮಾಸ್ಕ್ ಧರಿಸುವುದನ್ನು ಜನ ತಮ್ಮ ಜೀವನ ಶೈಲಿಯಲ್ಲಿ ರೂಢಿಸಿಕೊಂಡಿದ್ದಾರೆ ಎಂದು ಹೇಳಿದರು.
ಇನ್ನು ಕೊರೋನಾ ವಿರುದ್ದ ಭಾರತವೂ ಸರಿ ದಾರಿಯಲ್ಲಿ ಹೋರಾಡುತ್ತಿದೆ. ಜನರೇ ಕೊರೋನಾ ಹೋರಾಟದ ನೇತೃತ್ವ ವಹಿಸಿದ್ದಾರೆ. ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರವೂ ನೆರವನ್ನು ನೀಡುತ್ತಿದೆ ಎಂದು ತಿಳಿಸಿದರು.