ಬೆಂಗಳೂರು : ಕೊರೋನಾ ಚಿಕಿತ್ಸೆಗೆ ವೈದ್ಯಕೀಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ವೈದ್ಯಕೀಯ ಪರೀಕ್ಷೆ ಮುಗಿಯುತ್ತಿದ್ದಂತೆ ಕಡ್ಡಾಯವಾಗಿ ಕೊವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕು ಅಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರ ತಿಳಿಸಿದೆ.
MBBS, ಪಿಜಿ ವಿದ್ಯಾರ್ಥಿಗಳನ್ನು ಕೊವಿಡ್ ಸೇವೆಗೆ ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಕೊರೋನಾ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಮಹತ್ವದ ಕ್ರಮ ತೆಗೆದುಕೊಂಡಿರೋ ಸರ್ಕಾರ, ವೈದ್ಯಕೀಯ ಪದವಿ ಮುಗಿದ ತಕ್ಷಣ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ವರದಿ ಮಾಡಿಕೊಳ್ಳಬೇಕಿದ್ದು, ಕೊವಿಡ್ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವುದು ಕಡ್ಡಾಯ ಎಂದಿದೆ.
ಕೊವಿಡ್ ಸೇವೆ ಮಾಡಿದ ಸಿಬ್ಬಂದಿಗೆ ಹಲವು ವಿನಾಯಿತಿ ಆಫರ್ ನೀಡಿರೋ ಸರ್ಕಾರ ಪರೀಕ್ಷೆಗಳಲ್ಲಿ ಗ್ರೇಸ್ ಮಾರ್ಕ್ಸ್, ಗ್ರಾಮೀಣ ಸೇವಾವಧಿ ವಿನಾಯಿತಿ ನೀಡಲು ತೀರ್ಮಾನಿಸಿದೆ.