ರಾಜ್ಯದಲ್ಲಿ ‘ಮೇರಾ ಪರಿವಾರ್, ಬಿಜೆಪಿ ಪರಿವಾರ್’ ಅಭಿಯಾನಕ್ಕೆ ಚಾಲನೆ

0
259

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಈ ಅಭಿಯಾನ ಹಮ್ಮಿಕೊಂಡಿದೆ. ತಮ್ಮ ನಿವಾಸದಲ್ಲಿ ಬಿಜೆಪಿ ಧ್ವಜ ಹಾರಿಸಿ ಮತ್ತು ನಿವಾಸಕ್ಕೆ ಸ್ಟಿಕ್ಕರ್ ಅಂಟಿಸೋ ಮೂಲಕ ಯಡಿಯೂರಪ್ಪ ಅಭಿಯಾನಕ್ಕೆ ಚಾಲನೆ ಕೊಟ್ರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ರೇಣುಕಾಚಾರ್ಯ, ವಿಧಾನ ಪರಿಷತ್​ ಸದಸ್ಯರಾದ ಎಂಎಲ್​ಸಿ ವೈ.ಎ. ನಾರಾಯಣಸ್ವಾಮಿ, ತೇಜಸ್ವಿನಿ ಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ದೇಶಾದ್ಯಂತ 5 ಕೋಟಿ ಕಾರ್ಯಕರ್ತರ ಮನೆಗಳಲ್ಲಿ ಧ್ವಜ ಹಾರಿಸುವ ಸಂಕಲ್ಪ ಮಾಡಲಾಗಿದ್ದು, ರಾಜ್ಯದಲ್ಲಿ ಕನಿಷ್ಠ ೭೦ ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸಲಾಗುತ್ತಿದೆ ಎಂದು ಬಿಎಸ್​ವೈ ಹೇಳಿದ್ರು. ಅಲ್ಲದೇ ರಾಜ್ಯದ ೨೨ ಸಂಸತ್​ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಸ್ಸಂದೇಹವಾಗಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ ಎಂದು ಅವರು ಭರವಸೆ ವ್ಯಕ್ತಪಡಿಸಿದ್ರು.

LEAVE A REPLY

Please enter your comment!
Please enter your name here