Sunday, May 29, 2022
Powertv Logo
Homeರಾಜ್ಯಬೆಂಗಳೂರಲ್ಲಿ ಇನ್ನು ಮೂರು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರಲ್ಲಿ ಇನ್ನು ಮೂರು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೇನೆ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಇದೇ ರೀತಿ ವರುಣ ಅಬ್ಬರಿಸಲಿದ್ದಾನೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಮಳೆಯಾಗುವ ಮೊದಲು ಹವಾಮಾನ ಇಲಾಖೆಯೂ ಮಾಹಿತಿಯನ್ನು ನೀಡಿತ್ತು. ಆದರೆ ಇದೀಗ ಬೆಂಗಳೂರಲ್ಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗುತ್ತದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಈಗಿನ ಮಳೆ ಪೂರ್ವ ಮುಂಗಾರು ಸಮಯದಲ್ಲಿ ಆಗುವ ಮಳೆ. ಕರಾವಳಿ, ದಕ್ಷಿಣ ಒಳನಾಡು, ದಕ್ಷಿಣ ಕರ್ನಾಟಕ, ಮಳೆನಾಡಿನ ಬಹಳಷ್ಟು ಕಡೆಗಳಲ್ಲಿ ಮಳೆಯಾಗಲಿದೆ. ಅಲ್ಲಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಕೂಡ ಹೆಚ್ಚಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಗವಾಸ್ಕರ್ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

Recent Comments