ಬೆಂಗಳೂರು: ವಲಸೆ ಕಾರ್ಮಿಕರಿಗೆ ತಮ್ಮೂರಿಗೆ ತೆರಳಲು ಅವಕಾಶ ನೀಡಲಾಗಿದ್ದು, ಅದಕ್ಕಾಗಿ ಕೆಎಸ್ಆರ್ಟಿಸಿ ಬಸ್ನ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳುವ ವಲಸೆ ಕಾರ್ಮಿಕರು ಉಚಿತ ಪ್ರಯಾಣವನ್ನು ಮಾಡಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು,‘ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹಾಗಾಗಿ ಬಸ್ ನಿಲ್ದಾಣಗಳಲ್ಲಿ ಯಾರೂ ನೂಕುನುಗ್ಗಲು ಮಾಡದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಜನರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು‘ ಎಂದು ಮನವಿ ಮಾಡಿಕೊಂಡಿದ್ದಾರೆ.
ಉಚಿತ ಪ್ರಯಾಣಕ್ಕೆ ಅವಕಾಶ
ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ಊರುಗಳಿಗೆ ಉಚಿತವಾಗಿ ತೆರಳಬಹುದು.
ನೂಕುನುಗ್ಗಲು ಉಂಟಾಗದಂತೆ ನೋಡಿಕೊಳ್ಳುವುದರ ಜತೆಗೆ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಲು ಮನವಿ.#ಮನೆಯಲ್ಲೇಇರಿ@BSYBJP pic.twitter.com/jPWmHsplNR— CM of Karnataka (@CMofKarnataka) May 3, 2020