Home ರಾಜ್ಯ ಸಚಿವ ಕೆ.ಎಸ್ ಈಶ್ವರಪ್ಪಗೆ ತಗುಲಿದ ಕೊರೋನಾ ಸೋಂಕು

ಸಚಿವ ಕೆ.ಎಸ್ ಈಶ್ವರಪ್ಪಗೆ ತಗುಲಿದ ಕೊರೋನಾ ಸೋಂಕು

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಕೋರೋನಾ ಸೋಂಕು ತಗುಲಿದ್ದು,  ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ನನಗೆ ಕೊರೋನಾ ಸೋಂಕು ಧೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ” ಅಂತ ತಿಳಿಸಿದ್ದಾರೆ. 

 ಈಶ್ವರಪ್ಪ ಪುತ್ರ ಮತ್ತು ಜಿ.ಪಂ. ಸದಸ್ಯ ಕೆ.ಈ. ಕಾಂತೇಶ್​,  “ತಂದೆಯವರಿಗೆ ಕೊರೋನಾ ಸೋಂಕು ಧೃಢವಾಗಿದೆ. ನಮ್ಮ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ತಮ್ಮ ತಂದೆಗೆ ಜನರ ಆಶೀರ್ವಾದ ಇರಲಿ” ಎಂದು  ಫೇಸ್​​ಬುಕ್​​ನಲ್ಲಿ ಬರೆದುಕೊಂಡಿದ್ದಾರೆ.

ಈಶ್ವರಪ್ಪ ನಿನ್ನೆ ಶಿವಮೊಗ್ಗದಲ್ಲಿ, ಹಲವು ಕಾರ್ಯಕ್ರಮಗಳಲ್ಲಿ ಈಶ್ವರಪ್ಪ ಭಾಗಿಯಾಗಿದ್ದರು. ಕೊರೋನಾ ಪಾಸಿಟಿವ್ ವರದಿ ಬಂದಿದ್ದರಿಂದ  ಸಚಿವರ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಗೆ ಆತಂಕ ಶುರುವಾಗಿದೆ.  

LEAVE A REPLY

Please enter your comment!
Please enter your name here

- Advertisment -

Most Popular

 RAF ಘಟಕ ಶಂಕುಸ್ಥಾಪನೆ ವೇಳೆ ಕನ್ನಡಕ್ಕೆ ಒತ್ತು ನೀಡಿಲ್ಲ: ಹೆಚ್.ಡಿ.ಕೆ.

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿಯಲ್ಲಿ ಆರ್.ಎ.ಎಫ್. ಘಟಕ ಶಂಕುಸ್ಥಾಪನೆ ವಿಚಾರಕ್ಕೆ ಹೆಚ್.ಡಿ.ಕೆ. ಆಕ್ರೋಶ ವ್ಯಕಪಡಿಸಿದ್ದಾರೆ. ಶಂಕುಸ್ಥಾಪನೆ ವೇಳೆ ಫಲಕಗಳನ್ನು ಕನ್ನಡದಲ್ಲಿ ಹಾಕಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕೆ.,...

‘ಕೇಂದ್ರ ಗೃಹ ಸಚಿವರ ಆಗಮನಕ್ಕೆ ರೈತರ ವಿರೋಧ’

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ. ಕೇಂದ್ರದ ಹೊಸ ಕೃಷಿ ಕಾಯ್ದೆಗೆ...

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

Recent Comments