Home ರಾಜ್ಯ 'ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ'

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ ಬ್ಯಾಂಕರ್ ಪಿಟಿಆರ್‌ಪಿ ತ್ಯಾಗರಾಜನ್ ಅವರಿಗೆ ಹಣಕಾಸು, ಚೆನ್ನೈನ ಮಾಜಿ ಮೇಯರ್ ಮಾ ಸುಬ್ರಮಣಿಯನ್ ಅವರಿಗೆ ಆರೋಗ್ಯ, ಸ್ಟಾಲಿನ್‌ ಅವರ ಮಗ ಉದಯನಿಧಿ ಸ್ಟಾಲಿನ್ ಅವರ ಆಪ್ತ ಅನ್ಬಿಲ್ ಮಹೇಶ್ ಅವರಿಗೆ ಶಾಲಾ ಶಿಕ್ಷಣ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಹವಾಮಾನ ವೈಪರೀತ್ಯ, ರೈತರ ಕಲ್ಯಾಣ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಅನಿವಾಸಿ ತಮಿಳರ ಕಲ್ಯಾಣ ಖಾತೆಗಳನ್ನು ರಚಿಸಿ, ಹಂಚಿಕೆ ಮಾಡಲಾಗಿದೆ. ಸ್ಟಾಲಿನ್ ಅವರ ಸಂಪುಟದಲ್ಲಿ ಇಬ್ಬರು ಮಹಿಳಾ ಸಚಿವರು ಇರಲಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳ ಶಾಸಕರಿಗೂ ಸಚಿವ ಸ್ಥಾನ ದೊರೆತಿಲ್ಲ. ಡಿಎಂಕೆ ಪ್ರಾಬಲ್ಯವಿರುವ ಹಲವು ಜಿಲ್ಲೆಗಳ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಬದಲಿಗೆ ವಿರೋಧಪಕ್ಷ ಎಐಎಡಿಎಂಕೆ ಪ್ರಾಬಲ್ಯವಿರುವ ಪಶ್ಚಿಮದ ಜಿಲ್ಲೆಗಳಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ಎಐಎಡಿಎಂಕೆ ಪ್ರಾಬಲ್ಯದ ಪ್ರದೇಶದಲ್ಲಿ ಪಕ್ಷದ ನೆಲೆಗಟ್ಟಿಗೊಳಿಸಲು ಈ ತಂತ್ರ ಅನುಸರಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಪ್ರಮಾಣವಚನ ಸ್ವೀಕಾರದ ನಂತರ ಅವರು, ಶಕ್ತಿ ಕೇಂದ್ರ ಫೋರ್ಟ್‌ ಸೇಂಟ್ ಜಾರ್ಜ್‌ಗೆ ತೆರಳಲಿದ್ದಾರೆ. ಶುಕ್ರವಾರ ಸಂಜೆ ಸ್ಟಾಲಿನ್ ಅವರು ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಲಿದ್ದಾರೆ. ಸಂಜೆ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ಘೋಷಣೆಗಳನ್ನು ಸ್ಟಾಲಿನ್ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments