Home P.Special ಮತ್ತೊಮ್ಮೆ ದೇಶದ ಗಮನ ಸೆಳೆದ ಹಾಸನ ..! ಜಿಲ್ಲೆಯ ಸಹಕಾರಿ ಸಾಧಕರ ಜೊತೆ ಮೋದಿ ಮಾತು..!

ಮತ್ತೊಮ್ಮೆ ದೇಶದ ಗಮನ ಸೆಳೆದ ಹಾಸನ ..! ಜಿಲ್ಲೆಯ ಸಹಕಾರಿ ಸಾಧಕರ ಜೊತೆ ಮೋದಿ ಮಾತು..!

ಹಾಸನ : ಹಾಸನ ಎಂದರೆ ಹೆಮ್ಮೆ, ಹಾಸನ ಎಂದರೆ ಬಲ್ಮೆ, ರಾಜಕೀಯ, ಐತಿಹಾಸಿಕ ಹಿನ್ನೆಲೆ, ಶಿಲ್ಪಕಲೆಯ ಸಾಂಸ್ಕೃತಿಕ ವೈಭವದಿಂದ ವಿಶ್ವವ್ಯಾಪಿ ಹೆಸರುವಾಸಿಯಾಗಿರುವ  ಹಾಸನ, ಭಾನುವಾರ ಮತ್ತೊಂದು ಹೊಸ ಇತಿಹಾಸದ ಹೆಜ್ಜೆ ಗುರುತು ಮೂಡಿಸಿದೆ.

 ಪ್ರಧಾನಿ ನರೇಂದ್ರ ಮೋದಿ ಅವರು, ಜಿಲ್ಲೆಯ ಸಹಕಾರಿ ಸಾಧಕರೊಂದಿಗೆ ಬೆಂಗಳೂರಿನ ನಬಾರ್ಡ್ ಕಚೇರಿಯಿಂದ ನೇರವಾಗಿ ತುಸುಹೊತ್ತು ಸಂವಾದ ನಡೆಸುವ ಮೂಲಕ ಹಲವು ಹಿರಿಮೆಯ
ಹಾಸನಕ್ಕೆ ಮತ್ತೊಂದು ಮೊಹರು ಒತ್ತಿದ್ದಾರೆ.

ಹೌದು, ಹಾಸನ ಜಿಲ್ಲೆಯ ಉಗನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮತ್ತು ಜಿಲ್ಲೆಗೆ ಭಾನುವಾರ ನಿಜಕ್ಕೂ ಅವಿಸ್ಮರಣೀಯ ದಿನ.
ಏಕೆಂದರೆ ದೇಶದ ಪ್ರಧಾನಿ , ಸಹಕಾರ ಸಂಘದ ಪ್ರಗತಿ ಹಾಗೂ ರೈತ ಪರ ಕಾರ್ಯಗಳಿಗಾಗಿ ಸ್ಥಳೀಯ ಸಹಕಾರಿ ಸಂಘವೊಂದನ್ನು ಗುರುತಿಸಿ ಅದನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಪ್ರತಿನಿಧಿಗಳೊಂದಿಗೆ ನೇರ ವಿಡಿಯೋ ಸಂವಾದ ನಡೆಸುವ ಮೂಲಕ ಜಿಲ್ಲೆಯ ಸಾಧನೆಗೆ ಮತ್ತೊಂದು ಗೌರವ ತಂದುಕೊಟ್ಟಿರುವುದು  ಸಂಭ್ರಮಿಸುವ ಕ್ಷಣವಾಗಿದೆ.

ನರೇಂದ್ರ ಮೋದಿ ಅವರು ಭಾನುವಾರು ದೇಶವನ್ನುದ್ದೇಶಿಸಿ ಮಾಡಿದ ಆತ್ಮ ನಿರ್ಭರ್ ಅನ್ನದಾತ ಕುರಿತ ನೇರ ಟಿವಿ ಸಂವಾದದಲ್ಲಿ ಉಗನೆ ಪಂಚಾಯತ್ ನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವೇಗೌಡ ಅವರೊಂದಿಗೆ ಮಾತಾನಡಿದರು. ಇದು ಇಡೀ ದೇಶದ ಗಮನ ಸೆಳೆದಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವೇಗೌಡ ಅವರೊಂದಿಗೆ ನೇರವಾಗಿ ಮಾತನಾಡಿದ ಪ್ರಧಾನಿ ಮೋದಿ ಅವರು, ಸಂಸ್ಥೆಯ ಆರಂಭ ಹೇಗೆ, ಬೆಳವಣಿಗೆ, ಸಾಧನೆಯ ಹಾದಿಯ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶದ ರೈತರಿಗೆ 17,500 ಕೋಟಿ ರೂ ಮೊತ್ತದ ಕಿಸಾನ್ ಉಡುಗೊರೆ ನೀಡಿದ್ದ ಸಂದರ್ಭದಲ್ಲಿ ವಿಡಿಯೋ ಸಂವಾದ ನಡೆದ ನಮೋ ವಿಶೇಷ ಎಂಬಂತೆ ಹಾಸನ ಜಿಲ್ಲೆಯ ರೈತರ ಕೃಷಿ ಸಂಬಂಧಿಸಿದ ವಿಷಯ ಹಾಗೂ ಸಮಸ್ಯೆ ಆಲಿಸಿದ್ದು ನಿಜಕ್ಕೂ ಅತಿಶಯ ಎನಿಸಿತು. ಹಾಸನ ಜಿಲ್ಲೆಯ ರೈತರು ಹಾಗೂ ಉಗನೆ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರೊಂದಿಗೆ ಕೃಷಿ ಚಟುವಟಿಕೆಗಳ ಕಾರ್ಯಾಭಿವೃದ್ಧಿ ಕುರಿತು ಸಂವಾದ ನಡೆಸಿ ಮಾತನಾಡಿದ ಪ್ರಧಾನಿ ಅವರು ರೈತರು ಕಿಸಾನ್ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.

ಆರಂಭದಲ್ಲಿ ಮಾತನಾಡಿದ ಪ್ರಧಾನಿ ಸಂವಾದದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ರೈತರಿಗೆ ತಮ್ಮ ಪರಿಚಯ ಹಾಗೂ ಜಿಲ್ಲೆಯ ಕೃಷಿ ಸಂಬಂಧಿಸಿದ ಸಮಸ್ಯೆ ತಿಳಿಸುವಂತೆ ಕೇಳಿದರು. ಇದಕ್ಕೆ ಉಗನೆ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವೇಗೌಡ ಅವರು ಉತ್ತರಿಸಿ ಕಳೆದ 44 ವರ್ಷಗಳ ಹಿಂದೆ ಸಂಘ ಆರಂಭಿಸಿದ್ದು, 29 ಗ್ರಾಮಗಳ 2,300 ಕಿಸಾನ್ ಕುಟುಂಬಸ್ಥರು ಇದರ ಸದಸ್ಯರಾಗಿದ್ದಾರೆ. ವಾರ್ಷಿಕವಾಗಿ ಸಂಘ 50 ಕೋಟಿ ರೂ.ಗಳ ವಹಿವಾಟು ನಡೆಸುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಶುಂಠಿ, ಅಡಿಕೆ, ಮೆಕ್ಕೆಜೋಳ, ಆಲೂಗೆಡ್ಡೆ ಸೇರಿದಂತೆ ಇತರೆ ಕೃಷಿ ಬೆಳೆಗಳನ್ನು ಬೆಳೆಯುವುದಾಗಿ ಬಸವೇಗೌಡ ವಿವರಿಸಿದರು.
ಈ ವೇಳೆ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸುವ ಆಲೋಚನೆ ನಿಮಗೆ ಏಕೆ ಬಂತು ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವೇಗೌಡ, ರೈತರಿಗೆ ಸ್ಥಳೀಯವಾಗಿ ರಸಗೊಬ್ಬರ, ಬಿತ್ತನೆ ಬೀಜ, ಕಳೆನಾಶಕ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪರಿಕರ ದೊರೆಯುತ್ತಿರಲಿಲ್ಲ.

ಹಾಗಾಗಿ ಸಂಸ್ಥೆ ಸ್ಥಾಪಿಸಲಾಯಿತು. ಇದಾದ ಬಳಿಕ ಸಂಘದ ವತಿಯಿಂದ ರೈತರಿಗೆ ಕೃಷಿ ಸಂಬಂಧಿಸಿದ ವಸ್ತುಗಳ ಜೊತೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.
ಮತ್ತೆ ಮಾತು ಮುಂದುವರಿಸಿದ ಪ್ರಧಾನಿ ಸಂಘದ ವತಿಯಿಂದ ಈಗ ಯಾವ ಯೋಜನೆ ರೂಪಿಸಿದ್ದಿರಿ ಹಾಗೂ ಅದರಿಂದ ರೈತರಿಗೆ ಏನೆಲ್ಲಾ ಅನುಕೂಲವಾಗುತ್ತಿದೆ ಎಂದು ಮರು ಪ್ರಶ್ನೆ ಹಾಕಿದರು.
ಗ್ರಾಮದಲ್ಲಿ 1200 ಮೆಟ್ರಿಕ್ ಟನ್‍ನಷ್ಟು ಕೃಷಿಪೂರಕ ವಸ್ತುಗಳನ್ನು ದಾಸ್ತಾನು ಮಾಡಬಹುದಾದ ಗೋದಾಮು ನಿರ್ಮಿಸಲು ಯೋಜಿಸಿದ್ದು, 40 ಲಕ್ಷ ರೂ ವೆಚ್ಚವಾಗಲಿದೆ. ಅದಕ್ಕಾಗಿ ನಬಾರ್ಡ್ ನಿಂದ 32 ಲಕ್ಷ ರೂ ಸಾಲ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಸವೇಗೌಡ ಹೇಳಿದರು.

ಗೋದಾಮು ನಿರ್ಮಾಣದಿಂದ ಸ್ಥಳೀಯವಾಗಿ ಸುಮಾರು 3 ಸಾವಿರ ರೈತರಿಗೆ ರೈತರಿಗೆ ಉಪಯೋಗವಾಗಲಿದೆ. ರೈತರು ಬೆಳೆಯುವ ಅಡಿಕೆ, ಮೆಕ್ಕೆಜೋಳ ಇನ್ನಿತರೆ ಬೆಳೆಗಳನ್ನು ಉತ್ತಮ ಬೆಲೆ ಸಿಗುವವರೆಗೂ ವ್ಯವಸ್ಥಿತವಾಗಿ ದಾಸ್ತಾನು ಮಾಡಬಹುದು. ಇದರಿಂದ ಉತ್ಪಾದನಾ ವೆಚ್ಚ ಕಡಿಮೆಯಾಗುವುದರ ಜೊತೆಗೆ ಕೃಷಿ ಆದಾಯ ಹೆಚ್ಚಲಿದೆ. ರೈತರು ದಾಸ್ತಾನು ಮಾಡಿದ ಬೆಳೆಗೆ ಸಾಲ ಸೌಲಭ್ಯ ಸಹ ಒದಗಿಸಲಾಗುತ್ತದೆ, ಇದರ ನಿರ್ಮಾಣ ಕೆಲಸ 3 ತಿಂಗಳಲ್ಲಿ ಮುಗಿಯಲಿದೆ ಎಂದು ವಿವರಿಸಿದರು.

ಈ ಮಾಹಿತಿಗೆ ಸಂತೋಷಗೊಂಡ ಪ್ರಧಾನಿ ಅವರು, ಗ್ರಾಮಸ್ಥರನ್ನು ಒಟ್ಟುಗೂಡಿಸಿ ದೂರದೃಷ್ಟಿಯಿಂದ ಸಹಕಾರಿ ಸಂಘದ ಮೂಲಕ ಮಾಡುತ್ತಿರುವ ಕಾರ್ಯಚಟುವಟಿಕೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆಯ ರೈತರಂತೆ ಕರ್ನಾಟಕದ ಪ್ರತಿಯೊಂದು ಗ್ರಾಮದ ರೈತರೂ ಮುಂದಾಲೋಚನೆಯಿಂದ ತಮ್ಮ ಸಂಘಗಳ ಮೂಲಕ ಕೃಷಿ ಸಂಬಂಧಿಸಿದ ಯೋಜನೆ ರೂಪಿಸಿಕೊಂಡು ಮುನ್ನಡೆದರೆ ಅನ್ನದಾತರ ಆತ್ಮ ನಿರ್ಭರ್ ಯೋಜನೆ ಯಶಸ್ವಿಯಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಕಾರ್ಯದರ್ಶಿ ಬಸವೇಗೌಡ, ಉಗನೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇವೇಂದ್ರ, ನಿರ್ದೇಶಕರಾದ ಮದನ್, ಮಾಜಿ ಅಧ್ಯಕ್ಷ ರಾಘವಾಚಾರ್, ರೈತರಾದ ಚಂದ್ರು ಇದ್ದರು.

-ಪ್ರತಾಪ್ ಹಿರೀಸಾವೆ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments