Monday, August 25, 2025
Google search engine
HomeUncategorizedಎಮ್ಮೆ ಕೊರಳಿಗೆ ಪ್ರಧಾನಿ ಮೋದಿ ಭಾವಚಿತ್ರ ಯಡಿಯೂರಪ್ಪನವರ ಶವಯಾತ್ರೆ

ಎಮ್ಮೆ ಕೊರಳಿಗೆ ಪ್ರಧಾನಿ ಮೋದಿ ಭಾವಚಿತ್ರ ಯಡಿಯೂರಪ್ಪನವರ ಶವಯಾತ್ರೆ

ಗದಗ: ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ನೂರಾರು ಟ್ರ್ಯಾಕ್ಟರ್ ಹಾಗೂ ಬೈಕ್ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿದ‌ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ. ಶಿವಾಜಿ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನ ಎಮ್ಮೆಯ ಹಣೆಯ ಮೇಲೆ ಅಂಟಿಸಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಣುಕು ಶವಯಾತ್ರೆ ನಡೆಸಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿ ರೈತರ ಹೋರಾಟದ ಬೆಂಬಲಾರ್ಥವಾಗಿ ಹೋರಾಟ ನಡೆಸಿದ ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್.ಯಾವಗಲ್ಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಹೋರಾಟ ನಡೆಯಿತು. ಈ ವೇಳೆ ಅನೇಕ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ರೈತ ವಿರೋಧಿ ಕೃಷಿ ಕಾನೂನು ಹಿಂಪಡೆಯಬೇಕು. ಬೆಲೆ ಏರಿಕೆ ಕೂಡಲೆ ಇಳಿಕೆಯಾಗಬೇಕು ಅಂತ ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments