Home ಕ್ರೀಡೆ P.Cricket 1996ರಲ್ಲಿ ಕನ್ನಡಿಗ ಜಾವಗಲ್ ಶ್ರೀನಾಥ್ - 2019ರಲ್ಲಿ ಮೊಹಮ್ಮದ್ ಶಮಿ..!

1996ರಲ್ಲಿ ಕನ್ನಡಿಗ ಜಾವಗಲ್ ಶ್ರೀನಾಥ್ – 2019ರಲ್ಲಿ ಮೊಹಮ್ಮದ್ ಶಮಿ..!

ವಿಶಾಖಪಟ್ಟಣ : ಕ್ರಿಕೆಟ್​​ ಜಗತ್ತು ಕೌತುಕಗಳ ಆಗರ. ಇಲ್ಲಿ ಸಾಕಷ್ಟು ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. ಅದೆಷ್ಟೋ ದಾಖಲೆಗಳು ಇಂದಿಗೂ ಬ್ರೇಕ್ ಆಗಿಲ್ಲ…ಮುಂದೆ ಕೂಡ ಬ್ರೇಕ್ ಆಗುವುದು ಕಷ್ಟ..! ಕ್ರಿಕೆಟ್​ ಎಂಬ ವರ್ಣ ರಂಜಿತ ಆಟದಲ್ಲಿ ಪ್ರತಿಯೊಂದು ಮ್ಯಾಚ್​ನಲ್ಲೂ ಒಂದಲ್ಲ ಒಂದು ರೆಕಾರ್ಡ್​​ಗಳು ಪುಸ್ತಕದಲ್ಲಿ ದಾಖಲಾಗುತ್ತಲೇ ಇರುತ್ತವೆ. ಅಂತೆಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್​ನಲ್ಲೂ ಅನೇಕ ದಾಖಲೆಗಳು ನಿರ್ಮಾಣವಾಗಿದ್ದು, ವೇಗಿ ಮೊಹಮ್ಮದ್ ಶಮಿ ವಿಶೇಷ ರೆಕಾರ್ಡ್​ವೊಂದನ್ನು ಮಾಡಿದ್ದಾರೆ.
ಹೌದು, ವಿಶಾಖಪಟ್ಟಣದ ಡಾ.ವೈಎಸ್​ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಭಾರತದ ಎರಡನೇ ಇನ್ನಿಂಗ್ಸ್​ನಲ್ಲಿ ಶಮಿ 5 ವಿಕೆಟ್​ ಕಿತ್ತು ಮಿಂಚಿದರು. ಈ ಮೂಲಕ 1996ರ ಬಳಿಕ ಭಾರತದಲ್ಲಿ ಟೆಸ್ಟ್​​​ ಪಂದ್ಯದ 4ನೇ ಇನ್ನಿಂಗ್ಸ್​​ನಲ್ಲಿ 5 ವಿಕೆಟ್ ಕಿತ್ತ ಸಾಧನೆ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. 1996ರಲ್ಲಿ ಜಾವಗಲ್ ಶ್ರೀನಾಥ್ ಸೌತ್ ಆಫ್ರಿಕಾ ವಿರುದ್ಧದ ಮ್ಯಾಚ್​​ನಲ್ಲಿ 4ನೇ ಇನ್ನಿಂಗ್ಸ್​ನಲ್ಲಿ 6 ವಿಕೆಟ್​ ಪಡೆದಿದ್ದರು, ಅಂತೆಯೇ ಲ್ಯಾನ್ಸ್ ಕ್ಲುಸ್ನೆರ್​​​​​ 64 ರನ್​ಗಳಿಗೆ 8 ವಿಕೆಟ್​ ಕಿತ್ತಿದ್ದರು. ಆ ಬಳಿಕ ಯಾರೂ ಈ ಸಾಧನೆ ಮಾಡಿರ್ಲಿಲ್ಲ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments