Sunday, May 29, 2022
Powertv Logo
Homeರಾಜ್ಯಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿ : ಪ್ರತಾಪ್ ಸಿಂಹ

ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿ : ಪ್ರತಾಪ್ ಸಿಂಹ

ಮೈಸೂರು: ಹುಬ್ಬಳ್ಳಿ, ಬೆಂಗಳೂರಿನ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆ ಸಂಭವಿಸಿದ ಗಲಭೆಗಳಲ್ಲಿ ಮುಸ್ಲಿಮರ ಮನಸ್ಥಿತಿ ಹೇಗಿದೆ ಎಂದು ಎಲ್ಲರಿಗೂ ಗೊತ್ತಾಗಿದೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ವಿಚಾರಕ್ಕೆ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಸ್ಲಿಮರ ಮೆರವಣಿಗೆ ಮೇಲೆ ಹಿಂದೂಗಳು ಎಂದೂ ಕಲ್ಲು ತೂರಾಟ ನಡೆಸಿಲ್ಲ. ಆದರೆ ಹಿಂದೂಗಳ ಮೆರವಣಿಗೆ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ ನಡೆಸಲಾಗಿದೆ. ಈ ವಿಚಾರದಲ್ಲಿ ಮುಸ್ಲಿಮರ ಮನಸ್ಥಿತಿ ಬದಲಾಗಬೇಕು. ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿಯಾಗಿದೆ.ಕ್ರಿಶ್ಚಿಯನ್, ಪಾರ್ಸಿಗಳು ಸೇರಿದಂತೆ ಯಾವುದೇ ಧರ್ಮೀಯರು ಕಲ್ಲು ತೂರುವುದಿಲ್ಲ ಎಂದು ವಾಗ್ದಾಲಿ ನಡೆಸಿದರು.

ಇನ್ನು ಮುಸ್ಲಿಮರು ಮಾತ್ರ ಅನ್ಯ ಧರ್ಮೀಯರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಅಂಗಡಿ ಮುಗ್ಗಟ್ಟನ್ನು ಬಂದ್ ಮಾಡಿದ್ದರಿಂದ ಸಮಸ್ಯೆ ಆರಂಭವಾಯಿತು. ಮುಸ್ಲಿಮರಲ್ಲೂ ನಮ್ಮ ಡಿ ಎನ್ ಎ ಯೇ ಇದೆ. ಮುಸ್ಲಿಮರಲ್ಲೂ ನಮ್ಮದೇ ರಕ್ತ ಹರಿಯುತ್ತಿದೆ. ಮುಸ್ಲಿಮರು ಮನಸ್ಥಿತಿ ಬದಲಿಸಿಕೊಳ್ಳಬೇಕು. ಕಲ್ಲು ತೂರುವ ಸಂಸ್ಕೃತಿ ಬಿಡಬೇಕು. ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ. ಉತ್ತರ ಪ್ರದೇಶದಲ್ಲಿ ಇರುವಂತೆ ಇಲ್ಲಿಯೂ ಆಗಲಿದೆ ಎಂದು ಪ್ರತಾಪ ಸಿಂಹ ಎಚ್ಚರಿಸಿದರು.

- Advertisment -

Most Popular

Recent Comments