Home ಕ್ರೀಡೆ P.Cricket ನಿವೃತ್ತಿ ಬಳಿಕ ಧೋನಿ ಏನ್ ಮಾಡ್ತಾರೆ ಗೊತ್ತಾ?

ನಿವೃತ್ತಿ ಬಳಿಕ ಧೋನಿ ಏನ್ ಮಾಡ್ತಾರೆ ಗೊತ್ತಾ?

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಾವು ಅಂತರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾದ ಮೇಲೆ ಏನ್ ಮಾಡ್ತೀನಿ ಅಂತ ಸೂಚನೆಯನ್ನು ನೀಡಿದ್ದಾರೆ!
ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಧೋನಿ ಭಾರತಕ್ಕೆ ಎರಡು ವಿಶ್ವಕಪ್ ತಂದು ಕೊಟ್ಟ ನಾಯಕ. ಇಂಗ್ಲೆಂಡ್ ಮತ್ತು ವೇಲ್ಸ್​ನಲ್ಲಿ ನಡೆಯಲಿರುವ ಈ ಬಾರಿಯ ವರ್ಲ್ಡ್ ಕಪ್​ ಬಹುಶಃ ಧೋನಿ ಅವರ ಕೊನೆಯ ವಿಶ್ವಕಪ್ ಆಗುವ ಸಾಧ್ಯತೆ ಇದೆ. ವರ್ಲ್ಡ್​ಕಪ್ ಬಳಿಕ ಧೋನಿ ನಿವೃತ್ತಿ ಘೋಷಿಸಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ನಿವೃತ್ತಿಯ ನಂತರದದ ತಾವೇನು ಮಾಡಬಹುದು ಅನ್ನೋ ಸಿಕ್ರೇಟ್​ ಬಿಟ್ಟುಕೊಟ್ಟಿದ್ದಾರೆ.
ಧೋನಿ ಸೋಶಿಯಲ್ ಮೀಡಿಯಾದಲ್ಲೊಂದು ವಿಡಿಯೋ ಹರಿ ಬಿಟ್ಟಿದ್ದಾರೆ. ಆ ವಿಡಿಯೋ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
‘ನಾನು ನಿಮ್ ಜೊತೆ ಒಂದು ಸಿಕ್ರೇಟ್​ ಶೇರ್ ಮಾಡ್ಕೋಳಕ್ಕೆ ಇಷ್ಟಪಡ್ತೀನಿ. ನಾನು ಚಿಕ್ಕ ವಯಸ್ಸಲ್ಲಿ ಕಲಾವಿದನಾಗ್ಬೇಕು ಅಂತ ಬಯಸಿದ್ದೆ. ಆದ್ರೆ ಕ್ರಿಕೆಟ್​ನಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಕ್ರಿಕೆಟರ್ ಆದೆ. ಕಲಾವಿದನಾಗಿ ಮುಂದುವರೆಯೋಕೆ ಇದು ಒಂದೊಳ್ಳೆ ಸಮಯ ಅಂತ ಅನ್ಕೊಂಡು ಕೆಲವೊಂದಿಷ್ಟು ಚಿತ್ರಗಳನ್ನು ರಚಿಸಿದ್ದೇನೆ’ ಅಂದಿದ್ದಾರೆ. ಜೊತೆ ಮೂರು ಫೋಟೋಗಳನ್ನು ಪ್ರದರ್ಶಿಸಿದ್ದಾರೆ. ಒಂದು ಚಿತ್ರದಲ್ಲಿ ಪರಿಸರವಿದೆ, ಇನ್ನೊಂದರಲ್ಲಿ ಬಾಹ್ಯಾಕಾಶಯಾನದ ಬಗ್ಗೆ ಚಿತ್ರಿಸಿದ್ದಾರೆ. ಮೂರನೇ ಚಿತ್ರದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​​ನ ಜೆರ್ಸಿಯಲ್ಲಿನ ಬ್ಯಾಟ್ಸ್​​ಮನ್ ಅನ್ನು ಚಿತ್ರಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments