Home ರಾಜ್ಯ ಗುಂಡಿಕ್ಕಿ ರಾಜಸ್ಥಾನ ಮೂಲದ ಟೈಲ್ಸ್ ಉದ್ಯಮಿ ಹತ್ಯೆ!

ಗುಂಡಿಕ್ಕಿ ರಾಜಸ್ಥಾನ ಮೂಲದ ಟೈಲ್ಸ್ ಉದ್ಯಮಿ ಹತ್ಯೆ!

ಕಲಬುರಗಿ: ಕಳೆದ ನಾಲ್ಕೈದು ತಿಂಗಳಿಂದ ಕಲಬುರಗಿಯಲ್ಲಿ ಬಾಲ ಮುದುಡಿಸಿಕೊಂಡು ಸುಮ್ಮನ್ನಿದ್ದ ಪಾತಕಲೋಕ ಮತ್ತೆ ಬಾಲ ಬಿಚ್ಚಿದೆ. ಕಳೆದ ರಾತ್ರಿ ಕಲಬುರಗಿ ನಗರದ ಗೋದುತಾಯಿ ಬಡಾವಣೆಯಲ್ಲಿ ರಾಜಸ್ಥಾನ ಮೂಲದ ಟೈಲ್ಸ್ ಉದ್ಯಮಿ ಸುನೀಲ್ ರಂಕಾರನ್ನ ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಕಳೆದ ರಾತ್ರಿ ಎಂದಿನಂತೆ ಜೇವರ್ಗಿ ಕ್ರಾಸ್ ಬಳಿಯ ಟೈಲ್ಸ್ ಶೋರೂಮ್ ಕ್ಲೋಸ್ ಮಾಡಿಕೊಂಡು ಮನೆಗೆ ಹಿಂತಿರುಗುವಾಗ ಬೈಕ್ ಮೇಲೆ ಬಂದ ಇಬ್ಬರು ಮುಸುಕುಧಾರಿಗಳು, ಸುನೀಲ್ ರಂಕಾ ಅವರೊಂದಿಗೆ ಜಗಳ ತೆಗೆದಿದ್ದಾರೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದರಿಂದ, ರಿವಾಲ್ವರ್‌ನಿಂದ ಸುನೀಲ್ ರಂಕಾ ಎದೆಗೆ ಶೂಟ್ ಮಾಡಿದ್ದಾರೆ. ಎದೆಗೆ ಗುಂಡು ಹೊಕ್ಕಿದ್ದರಿಂದ ತ್ರೀವ ರಕ್ತಸ್ರಾವದಿಂದ ಕೆಳಗೆ ಕುಸಿದುಬಿದ್ದ ರಂಕಾರನ್ನ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಚಿಕಿತ್ಸೆ ನೀಡುವ ಮುನ್ನವೇ ರಂಕಾ ಪ್ರಾಣ ಪಕ್ಷಿ ಹಾರಿಹೋಗಿದೆ. ಇನ್ನೂ ಘಟನೆಗೆ ಹಳೆ ವೈಷಮ್ಯವೋ ಅಥಾವ ಹಣಕಾಸಿನ ಕಾಣವೋ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್ ಸತೀಶ್‌ಕುಮಾರ ಹಾಗೂ ಡಿಸಿಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲಿಸಿದ್ದು, ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

-ಅನಿಲ್‌ಸ್ವಾಮಿ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments