ಸಂಗೀತ ದಿಗ್ಗಜ ಅರ್ಜುನ್ ಜನ್ಯಗೆ ಲಘು ಹೃದಯಾಘಾತ

0
600

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ. ಮೈಸೂರಿನ ಬೋಗಾದಿಯಲ್ಲಿರುವ ತಮ್ಮ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರ್ಜುನ್ ಜನ್ಯ ಅವರಿಗೆ ಬುಧವಾರ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಅವರಿಗೆ ಹೃದಯಾಘಾತ ಆಗಿರುವುದು ತಿಳಿದುಬಂದಿದೆ. ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

LEAVE A REPLY

Please enter your comment!
Please enter your name here