Home ರಾಜ್ಯ ಬೆಂಗಳೂರು ನಾಳೆಯಿಂದ ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲ್ವೆ ಸೇವೆ ಆರಂಭ

ನಾಳೆಯಿಂದ ಮೈಸೂರು-ಬೆಂಗಳೂರು ಪ್ಯಾಸೆಂಜರ್ ರೈಲ್ವೆ ಸೇವೆ ಆರಂಭ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಕೆಲವು ಮಾರ್ಗಗಳಲ್ಲಿ ಭಾನುವಾರ ಹೊರತುಪಡಿಸಿ ನಾಳೆಯಿಂದ ಕಾಯ್ದಿರಿಸದ ರೈಲುಗಳ ಸಂಚಾರವನ್ನು ಆರಂಭಸಲಿದೆ.

06255 ಸಂಖ್ಯೆಯ 16 ಬೋಗಿಗಳ ರೈಲು ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ಬೆಂಗಳೂರಿನಿಂದ ಸಂಜೆ 7ಕ್ಕೆ ಹೊರಟು ರಾತ್ರಿ 10ಕ್ಕೆ ಮೈಸೂರು ತಲುಪಲಿದೆ. 06256 ಸಂಖ್ಯೆ ರೈಲು ಬೆಳಗ್ಗೆ 6.10ಕ್ಕೆ ಮೈಸೂರಿನಿಂದ ಹೊರಟು 9.15ಕ್ಕೆ ಬೆಂಗಳೂರಿಗೆ ತಲುಪುತ್ತದೆ. 06257 ಸಂಖ್ಯೆಯ ರೈಲು ಬೆಳಗ್ಗೆ 9.20ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.45ಕ್ಕೆ ಮೈಸೂರಿಗೆ ಆಗಮಿಸಲಿದೆ. 06258 ಸಂಖ್ಯೆ ರೈಲು ಮೈಸೂರಿನಿಂದ ಮಧ್ಯಾಹ್ನ 1.45ಕ್ಕೆ ಹೊರಟು ಸಂಜೆ 5ಕ್ಕೆ ಬೆಂಗಳೂರು ತಲುಪಲಿದೆ.

ಈ ರೈಲುಗಳು ನಾಯಂಡಹಳ್ಳಿ ಜ್ಞಾನ ಭಾರತಿ,ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದಗಿರಿ ಕೊಪ್ಪಲ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿಯಲ್ಲಿ ನಿಲುಗಡೆ ಹೊಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments