ಬೆಂಗಳೂರು : ಕನ್ನಡ ಪರ ಹೋರಾಟಗಾರ ನಾಗೇಶ್ ಕೊರೋನಾದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು 2 ದಿನಗಳ ಹಿಂದೆ ಸುಂಕದಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ಕಾರ್ಮಿಕರ ವೇದಿಕೆ ರಾಜ್ಯಾಧ್ಯಕ್ಷರಾಗಿದ್ದ ನಾಗೇಶ್ ಅವರ ನಿಧನಕ್ಕೆ ಕನ್ನಡಪರ ಸಂಘಟನೆಗಳು ಸಂತಾಪ ಸೂಚಿಸಿವೆ.