Home ದೇಶ-ವಿದೇಶ ಪೊಲೀಸರ ಗುಂಡೇಟಿಗೆ ನಕ್ಸಲ್ ಬಲಿ

ಪೊಲೀಸರ ಗುಂಡೇಟಿಗೆ ನಕ್ಸಲ್ ಬಲಿ

ಛತ್ತೀಸ್​​​​ ಗಢ : ಧಮ್ತಾರಿ ಜಿಲ್ಲೆಯಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ನಕ್ಸಲ್ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಜಿಲ್ಲಾ ಕೇಂದ್ರ ಧಮ್ತಾರಿಯಿಂದ 80 ಕಿಮೀ ದೂರದಲ್ಲಿರುವ ಪೊಲೀಸ್​​​ ಠಾಣೆ ವ್ಯಾಪ್ತಿಯ ಘೋರಗಾಂವ್​ ಗ್ರಾಮದ ಕಾಡಿನಲ್ಲಿ ಭಾನುವಾರ  ಜಿಲ್ಲಾ ರಿಸರ್ವ್​​ ಗಾರ್ಡ್​ ( ಡಿಆರ್​ ಜಿ) ತಂಡ ಗಸ್ತು ತಿರುಗುತ್ತಿದ್ದಾಗ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಆಗ ಪೊಲೀಸರು ಮರು ದಾಳಿ ನಡೆಸಿದ್ದಾರೆ.

ಮಾವೋವಾದಿಗಳ ಗೋಬ್ರಾಲಾಸ್​​​​ನ ಸಕ್ರಿಯ ಸದಸ್ಯ ರವಿ ಮೃತ ಎಂದು ಗುರುತಿಸಲಾಗಿದೆ. ಅಂತೆಯೇ ಜಾರ್ಖಂಡ್​​ನ ರಾಂಚಿಯಲ್ಲಿ ಪೀಪಲ್ಸ್​​​​ ಲಿಬರೇಶನ್​​ನ ಫ್ರಂಟ್​​ ಆಫ್ ಇಂಡಿಯಾ (ಪಿಎಲ್​​​ಎಫ್​​ಐ)ಗೆ ಸೇರಿದ ಮೂವರು ನಕ್ಸಲ್​​ಗಳನ್ನು ಬಂಧಿಸಿ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments