ಏರ್ ಶೋನಲ್ಲಿ ಭಾರೀ ಅಗ್ನಿ ದುರಂತ: 300 ಕಾರು ಬೆಂಕಿಗಾಹುತಿ

0
258

ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್​ ಶೋನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 150ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿಯಾಗಿವೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈಗಾಗಲೇ 10ಕ್ಕೂ ಹೆಚ್ಚು ಅಗ್ನಿ ಶಾಮಕ ವಾಹನ ಸ್ಥಳಕ್ಕೆ ತಲುಪಿವೆ. ಏರೋ ಶೋನ ಓಪನ್ ಪಾರ್ಕಿಂಗ್ ಸ್ಲಾಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರುಗಳು ಬೆಂಕಿಗಾಹುತಿಯಾಗಿದ್ದು ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ ಅಂತ ಹಿರಿಯ ಪೊಲೀಸ್ ಅಧಿಕಾರಿ ಎಂ.ಎನ್​ ರೆಡ್ಡಿ ಟ್ವೀಟ್​ ಮಾಡಿದ್ದಾರೆ. ಐದು ದಿನಗಳ ಏರ್ ಶೋ ಬುಧವಾರ ಆರಂಭಗೊಂಡಿದ್ದು ನಾಳೆ ಮುಗಿಯಲಿದೆ.

LEAVE A REPLY

Please enter your comment!
Please enter your name here