Home ದೇಶ-ವಿದೇಶ ನೀಟ್​ ಪರೀಕ್ಷೆಗೆ ರೈಲಿನಲ್ಲಿ ಹೊರಟ ವಿದ್ಯಾರ್ಥಿಗಳು ಅತಂತ್ರ..!

ನೀಟ್​ ಪರೀಕ್ಷೆಗೆ ರೈಲಿನಲ್ಲಿ ಹೊರಟ ವಿದ್ಯಾರ್ಥಿಗಳು ಅತಂತ್ರ..!

ನೀಟ್​ ಪರೀಕ್ಷೆ ಬರೆಯಲು ಬೆಂಗಳೂರಿಗೆ ಹಂಪಿ ಎಕ್ಸ್​ಪ್ರೆಸ್​​ನಲ್ಲಿ ಪ್ರಯಾಣ ಬೆಳೆಸಿದ್ದ ವಿದ್ಯಾರ್ಥಿಗಳು ರೈಲು ವಿಳಂಬದಿಂದ ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಂಡಿದ್ದಾರೆ.
ಬಳ್ಳಾರಿ, ಕೊಪ್ಪಳ, ಸೇರಿದಂತೆ ನಾನಾ ಜಿಲ್ಲೆಗಳ ಸುಮಾರು ಸುಮಾರು 400 ವಿದ್ಯಾರ್ಥಿಗಳು ಪ್ರಯಾಣ ಬೆಳಸಿದ್ದರು. ಬೆಳಗ್ಗೆ 6.15ಕ್ಕೆ ಬೆಂಗಳೂರು ತಲುಪಬೇಕಿದ್ದ ಹಂಪಿ ಎಕ್ಸ್​ಪ್ರೆಸ್​​​ ಚಿಕ್ಕಮಗಳೂರಿನ ಬಳ್ಳಕೆರೆಯಲ್ಲಿ ಮಾರ್ಗ ಬದಲಾವಣೆ ಮಾಡಿದ್ದು, ವಿಳಂಬದಿಂದಾಗಿ ವಿದ್ಯಾರ್ಥಿಗಳು ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ರೈಲು ಸೇವೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ದೇಶಾದ್ಯಂತ ಏಕಕಾಲಕ್ಕೆ ನೀಟ್​ ಪರೀಕ್ಷೆ ನಡೆಯುತ್ತಿದೆ. ಮಧ್ಯಾಹ್ನ 2 ಗಂಟೆಗೆ ಪರೀಕ್ಷೆ ಆರಂಭವಾಗುತ್ತಿದ್ದು, ಅರ್ಧಗಂಟೆ ಮೊದಲೇ ವಿದ್ಯಾರ್ಥಿಗಳು ಪರೀಕ್ಷ ಕೇಂದ್ರದಲ್ಲಿ ಹಾಜರಿರಬೇಕು. ಆದರೆ, ರೈಲು ವಿಳಂಬದಿಂದ ಪರೀಕ್ಷೆಯನ್ನು ಮಿಸ್ ಮಾಡಿಕೊಂಡಿದ್ದಾರೆ.
ಇನ್ನೊಂದೆಡೆ ಬೆಂಗಳೂರಲ್ಲಿ ದಿಢೀರ್ ಅಂತ ನೀಟ್​ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಚುನಾವಣಾ ಕಾರಣ ಕೊಟ್ಟು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿದ್ದು, ವಿದ್ಯಾರ್ಥಿಗಳಿಗೆ ಈ ಬಗ್ಗೆ ಎನ್​ಇಟಿ ಸರಿಯಾದ ಮಾಹಿತಿಯನ್ನೂ ನೀಡಿಲ್ಲ. ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಿಗದಿ ಆಗಿದ್ದ ಪರೀಕ್ಷಾ ಕೇಂದ್ರ . ಹೊಸೂರು ರಸ್ತೆಯ ದಯಾನಂದ ಸಾಗರ್ ಕಾಲೇಜಿಗೆ ಪರೀಕ್ಷೆ ಕೇಂದ್ರ ಶಿಫ್ಟ್ ಆಗಿದೆ. ಆದ್ದರಿಂದ ಕೊನೆಯ ಹಂತದಲ್ಲಿ ಪರೀಕ್ಷಾ ಕೇಂದ್ರ ತಲುಪಲು ಪರೀಕ್ಷಾರ್ಥಿಗಳು ಪರದಾಡ ಬೇಕಾಯಿತು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments