ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಆದೇಶದ ಮಧ್ಯೆಯು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಶನಿವಾರ ಒಂದೇ ದಿನದಲ್ಲಿ 16 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 144 ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಇಂದು ಒಟ್ಟು 16 ಪ್ರಕರಣ ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 144ಕ್ಕೇರಿದೆ. ಅಲ್ಲದೆ ಬೆಂಗಳೂರಲ್ಲಿ ಒಟ್ಟು 55 ಸೋಂಕಿತರು, ಮೈಸೂರಿನಲ್ಲಿ 28 ಪ್ರಕರಣ ಹಾಗೂ ದಕ್ಷಿಣ ಕನ್ನಡದಲ್ಲಿ 12 ಮಂದಿ ಸೋಂಕಿತರು ಇದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 32,649 ಜನರು ನಿಗಾದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.