Home ರಾಜ್ಯ ಬೆಂಗಳೂರು ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ..!

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ..!

ಬೆಂಗಳೂರು: ಹೊಸ ಪ್ರಭೇದದ ಕೊರೋನಾ ವೈರಸ್ ಹಿನ್ನಲೆಯಲ್ಲಿ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಸಭೆ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರೂಪಾಂತರಗೊಂಡ ಕೊರೋನಾ ವೈರಸ್ ಹಿನ್ನಲೆ ತುರ್ತು ಸಭೆ ಕರೆದಿದ್ದರು. ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು. ಹೊಸ ಪ್ರಭೇದದ ಮುನ್ನಚ್ಚರಿಕೆ ಕ್ರಮವಾಗಿ ಇಂದಿನಿಂದ ಜನವರಿ 2 ರವಗೆ ಅಂದರೆ 10 ದಿನಗಳವರೆಗೆ ನೈಟ್ ಕರ್ಫ್ಯೂ ಜಾರಿಮಾಡಲಾಗುತ್ತದೆ ಎಂದರು.

ರಾತ್ರಿ ಹತ್ತು ಗಂಟೆ ನಂತರ ತುರ್ತು ವಾಹನಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ವರ್ಚಾರಣೆಗೆ ಎಂಜಿ, ಬಿಗ್ರೇಡ್ ರೋಡ್ ನಲ್ಲಿ ಬ್ರೇಕ್. ರಾತ್ರಿ 10 ಗಂಟೆ ನಂತರ ಬಾರ್ ರೆಸ್ಟೋರೆಂಟ್ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಬ್ರಿಟನ್ ನಿಂದ ಬಂದವರಿಗೆ ಕಡ್ಡಾಯವಾಗಿ 28 ದಿನ ಕ್ವಾರಂಟೈನ್ ಮಾಡಲಾಗುವುದು ಎಂದು ಹೇಳಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗೊಷ್ಠಿಯಲ್ಲಿ ಹೇಳಿದ್ದಾರೆ.

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ, ನೈಟ್ ಸಂಚರಿಸುವ ಬಸ್ ಗಳಿಗೂ ಬ್ರೇಕ್ ಬೀಳುತ್ತಾ?, ಹೊರ ರಾಜ್ಯಕ್ಕೆ ಹೋಗುವ ಬಸ್ ಗಳ ಕಥೆ ಏನು? ಈಗಾಗಲೇ ಬುಕ್ ಮಾಡಿರುವ ಪ್ರಯಾಣಿಕರು ಹೋಗಬಹುದಾ? ಎಂದು ಸಾರಿಗೆ ಸಂಸ್ಥೆಗಳು ಹಾಗೂ ಪ್ರಾಣಿಕರ ಗೊಂದಲಗಳಿಗೆ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಹೊರಬೀಳಬೇಕಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments