ಚಿಕ್ಕಮಗಳೂರು : ಮಂಗಳೂರು-ಚಿಕ್ಕಮಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.
ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ನೀಡಲಾಗಿದೆ.