Home ರಾಜ್ಯ 'ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ'

‘ಗ್ರಾಮಸ್ಥರ ಕೆರೆ ನಿರ್ಮಾಣಕ್ಕೆ ನಿನಾಸಂ ಸತೀಶ್ ಮೆಚ್ಚುಗೆ’

ಶಿವಮೊಗ್ಗ: ಗ್ರಾಮದ ಜನರೇ ಸೇರಿಕೊಂಡು, ಗ್ರಾಮದ ಕೆರೆಗಳನ್ನು ಅಭಿವೃದ್ಧಿಗೊಳಿಸಿದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುತ್ತಲ ಗ್ರಾಮದಲ್ಲಿ ಎರಡು ಕೆರೆಗಳನ್ನು ಜನರೆಲ್ಲರೂ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಇಲ್ಲಿನ ಕೆರೆಗಳಲ್ಲಿ ಹೂಳು ತುಂಬಿ‌ ನೀರು ನಿಲ್ಲದೆ, ಕೃಷಿ ಮಾಡಲು ಅನಾನುಕೂಲ ಉಂಟಾಗಿತ್ತು. ಮೂಲೆಗದ್ದೆ ಮಠದ ಸ್ವಾಮೀಜಿಗಳು, ಸಾರಾ ಸಂಸ್ಥೆ ಹಾಗೂ ಸ್ವಗ್ರಾಮ ಯೋಜನೆ ಇವರುಗಳು ಕೈ ಜೋಡಿಸಿ, ಗ್ರಾಮಸ್ಥರ ನೆರವಿಗೆ ನಿಂತು, ಈ ಮುತ್ತಲ‌ ಕೆರೆಯನ್ನು ಕಳೆದ ವರ್ಷ ಅಭಿವೃದ್ಧಿ ಪಡಿಸಿದ್ದರು. ಕೇವಲ ಮುತ್ತಲ ಕೆರೆ ಅಲ್ಲದೇ, ಗ್ರಾಮದ ಇತರೇ ಕೆರೆಗಳನ್ನು ಕೂಡ ಪುನಶ್ಚೇತನ ಕಾರ್ಯವನ್ನು ವೀಕ್ಷಿಸಿ, ಪ್ರಶಂಸೆ ವ್ಯಕ್ತಪಡಿಸಿದರು.

ಹೀಗಾಗಿ, ಮುತ್ತಲ ಕೆರೆಯಲ್ಲಿ ನೀರು ನಿಂತಿದ್ದು, ಗ್ರಾಮಸ್ಥರಿಗೆ ಅನುಕೂಲವಾಗಿದೆ.  ಅಲ್ಲದೇ ಹಲವಾರು ಪ್ರಾಣಿ ಪಕ್ಷಿ ಸಂಕುಲದ ದಾಹ ತಣಿಸಲು ಸಹಕಾರಿಯಾಗಿದೆ. ಕೆರೆ ತುಂಬಿರುವ ಕಾರಣ ಗ್ರಾಮಸ್ಥರು ಕೆಲಸಕ್ಕಾಗಿ ವಲಸೆ ಹೋಗುವುದನ್ನು ಬಿಟ್ಟು ತಮ್ಮ ಗ್ರಾಮದಲ್ಲಿಯೇ ಕೃಷಿಯತ್ತ ಮುಖ ಮಾಡಿದ್ದಾರೆ. ಈ ಮೂಲಕ, ನೂರಾರು ಎಕರೆ ಕೃಷಿಭೂಮಿಗೆ ನೀರುಣಿಸುವ ಮೂಲಕ ಹಸಿರೀಕರಣಕ್ಕೆ ಈ ಕೆರೆ ಕಾರಣವಾಗಿದೆ. ಅಂದಹಾಗೆ, ಈ ಕೆರೆ ಅಭಿವೃದ್ಧಿಯ ಬಗ್ಗೆ ತಮ್ಮ ಸ್ನೇಹಿತರಿಂದ ತಿಳಿದ ನಟ ನೀನಾಸಂ ಸತೀಶ್ ಅಲಿಯಾಸ್ ಕ್ವಾಟ್ಲೇ ಸತಿಸಾ, ಮುತ್ತಲ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಜನರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುತ್ತಲ‌‌ ಗ್ರಾಮಸ್ಥರು ಮಾಡಿರುವ ಒಳ್ಳೆಯ ಕಾರ್ಯವನ್ನು ಬೇರೆ ಗ್ರಾಮದವರು ಕೂಡ ಅನುಸರಿಸಬೇಕು ಎಂದು ನೀನಾಸಂ ಸತೀಶ ಈ ವೇಳೆ, ಕರೆ‌ ನೀಡಿದರು. ಈ ಸಂದರ್ಭದಲ್ಲಿ, ನಿರ್ದೇಶಕ ಗಣೇಶ್, ಗುರುಮೂರ್ತಿ, ಮಂಜುನಾಥ್ ಬ್ಯಾಣದ್, ಸತೀಶ್ ಹಂಜಾ, ರಮೇಶ್, ನಟ ಏಸು ಪ್ರಕಾಶ್ ಸೇರಿ ಗ್ರಾಮಸ್ಥರು ಹಾಜರಿದ್ಧರು.

LEAVE A REPLY

Please enter your comment!
Please enter your name here

- Advertisment -

Most Popular

ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ

ಚಿಕ್ಕಮಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಮ್ಮೆ ಸಫಾರಿ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ರಕ್ಷಿತಾರಣ್ಯಕ್ಕೆ ನಟ ದರ್ಶನ್ ಭೇಟಿ. ಭದ್ರಾ ರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದ ಚಾಲೆಂಜಿಂಗ್ ಸ್ಟಾರ್. ಚಾಲೆಂಜಿಂಗ್ ಸ್ಟಾರ್ ಜೊತೆ ರಕ್ಷಿತಾರಣ್ಯದ...

ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಮಂಕಾದಂತೆ ಕಾಣ್ತಿದೆ ಎನ್ನುವಷ್ಟರಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ. 1 ಲಕ್ಷಕ್ಕೂ ಹೆಚ್ಚು...

ನಿಖಿಲ್ ಕುಮಾರ್ ಸ್ವಾಮಿಗೂ ಕೊರೋನಾ ಪಾಸಿಟಿವ್

ಬೆಂಗಳೂರು : ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ವರದಿಯಾಗಿತ್ತು ಈಗ ನಿಖಿಲ್ ಅವರಿಗೂ ಪಾಸಿಟಿವ್ ಬಂದಿದೆ. ಇಂದು ನಿಖಿಲ್ ಅವರ ಮೊದಲನೇ ವಾರ್ಷಿಕೋತ್ಸವವೂ ಆಗಿದೆ.  ನಾನು ಇಂದು...

ವಿವಾಹಕ್ಕೆ 100 – 200, ಅಂತ್ಯಸಂಸ್ಕಾರಕ್ಕೆ 25 – 50 ಜನ ಮಾತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪನವರು ಕೊರೋನಾ ಕಾರಣದಿಂದ ಆಸ್ಪತ್ರೆಗೆ ದಾಖಲಾದ ಕಾರಣ ಸಚಿವ ಸುಧಾಕರ್ ಮತ್ತು ಬೊಮ್ಮಾಯಿ ಅವರು ಸಭೆ ನಡೆಸಿ ರಾಜ್ಯದಲ್ಲಿ ಇನ್ಮೇಲೆ ಟಫ್ ರೂಲ್ಸ್ ಶುರುವಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.  ಕೊವಿಡ್ ನಿಯಮ...

Recent Comments