Friday, September 30, 2022
Powertv Logo
Homeದೇಶಮಾರ್ಚ್​ 20ರಂದು ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು..!

ಮಾರ್ಚ್​ 20ರಂದು ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು..!

ನವದೆಹಲಿ : ನಿರ್ಭಯಾ ಅತ್ಯಾಚಾರಿಗಳಿಗೆ ಮಾರ್ಚ್​ 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ದೆಹಲಿ ಕೋರ್ಟ್​ ಹೊಸ ಡೆತ್ ವಾರೆಂಟ್ ಹೊರಡಿಸಿದೆ. ಅಪರಾಧಿ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ದಯಾ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ಬುಧವಾರ ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಹೊಸ ದಿನಾಂಕ ನಿಗದಿಪಡಿಸುವಂತೆ ದೆಹಲಿ ಸರ್ಕಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಇದಕ್ಕು ಮುನ್ನ ಉಳಿದ ಮೂವರು ಅಪರಾಧಿಗಳಾದ ಮುಖೇಶ್, ವಿನಯ್ ಮತ್ತು ಅಕ್ಷಯ್ ಸಲ್ಲಿಸಿದ್ದ ದಯಾ ಅರ್ಜಿಯನ್ನು ಕೂಡ ರಾಷ್ಟ್ರಪತಿಗಳು ತಿರಸ್ಕರಿಸಿದ್ದರು. ಪವನ್ ಮಾರ್ಚ್​ 2ರಂದು ರಾಷ್ಟ್ರಪತಿಗಳಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದ. ಹೀಗಾಗಿ ಮಾರ್ಚ್​ 3ರ ಬೆಳಗ್ಗೆ 6 ಗಂಟೆಗೆ ಜಾರಿಯಾಗಬೇಕಿದ್ದ ಗಲ್ಲು ಶಿಕ್ಷೆ ಮೂರನೇ ಬಾರಿಗೆ ಮುಂದೂಡಲ್ಪಟ್ಟಿತ್ತು.
ಅಪರಾಧಿಗಳಾದ ಮುಖೇಶ್ (32)  ಪವನ್​ ಗುಪ್ತಾ(25) ವಿನಯ್​ ಶರ್ಮ (26) ಮತ್ತು ಅಕ್ಷಯ್​ ಕುಮಾರ್​ಸಿಂಗ್(31) ಗಲ್ಲು ಶಿಕ್ಷೆಗೆ ಗುರಿಯಾಗುತ್ತಿದ್ದಾರೆ. ಒಟ್ಟು 6 ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್​ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾನೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments