ನವದೆಹಲಿ : 2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಪಟಿಯಾಲಾ ಹೌಸ್ ನ್ಯಾಯಾಲಯ ಅಂತಿಮ ತೀರ್ಪು ನೀಡಿದೆ. ನಾಲ್ವರು ಅಪರಾಧಿಗಳನ್ನು ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ಆದೇಶಿಸಿ ನ್ಯಾ. ಸತೀಶ್ ಕುಮಾರ್ ಅರೋರಾ ಮಹತ್ವದ ತೀರ್ಪು ನೀಡಿದ್ದಾರೆ.
ಅಕ್ಷಯ್ ಠಾಕೂರ್, ಮುಕೇಶ್, ವಿನಯ್ ಮತ್ತು ಪವನ್ ಎಂಬ ಅಪರಾಧಿಗಳು ಗಲ್ಲಿಗೆ ಗುರಿಯಾಗಿದ್ದಾರೆ. ಈ ನಾಲ್ವರು ಸೇರಿದಂತೆ ಒಟ್ಟು 6 ಮಂದಿ ಅಪರಾಧಿಗಳಲ್ಲಿ 2013ರಲ್ಲಿ ರಾಮ್ಸಿಂಗ್ ಎಂಬ ಅಪರಾಧಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರೆ, ಇನ್ನೊಬ್ಬ ಅಪರಾಧಿ ಕೃತ್ಯ ನಡೆದಾಗ ಅಪ್ರಾಪ್ತನಾಗಿದ್ದರಿಂದ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದಾನೆ.