ನವದೆಹಲಿ: ಸಿಬಿಐ ನಿರ್ದೇಶಕರನ್ನು ಆರಿಸಲು ಶೀಘ್ರ ಇನ್ನೊಂದು ಸಭೆ ನಡೆಯಲಿದೆ ಅಂತ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವ ಆಯ್ಕೆ ಸಮಿತಿ ಇಂದು ನಡೆಸಿದ ಸಭೆಯಲ್ಲಿ ಇದುವರೆಗೂ ಆಯ್ಕೆಯನ್ನು ಅಂತಿಮಗೊಳಿಸಿಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ.
“ಸಿಬಿಐ ನಿರ್ದೇಶಕರ ಸ್ಥಾನಕ್ಕೆ ಅರ್ಹತಾ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಸಮಿತಿ ಸದಸ್ಯರ ಜೊತೆ ಹಂಚಿಕೊಳ್ಳಲಾಗಿದೆ. ಆದರೆ ಆಯ್ಕೆ ಕುರಿತು ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಶೀಘ್ರದಲ್ಲಿಯೇ ಈ ಸಂಬಂಧ ಇನ್ನೊಂದು ಸಭೆ ನಡೆಯಲಿದೆ” ಅಂತ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಅವರ ಅಧಿಕೃತ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯ ನ್ಯಾ.ರಂಜನ್ ಗೊಗೊಯ್, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದರು.
zithromax for chlamydia treatment
zithromax 250 mg