Home ರಾಜ್ಯ ಬೆಂಗಳೂರು ಬೆಂಗಳೂರು ಲಾಕ್​​​ ಮಾಡುವ ಉದ್ದೇಶ ಇಲ್ಲ : ಆರ್.ಅಶೋಕ್

ಬೆಂಗಳೂರು ಲಾಕ್​​​ ಮಾಡುವ ಉದ್ದೇಶ ಇಲ್ಲ : ಆರ್.ಅಶೋಕ್

ಬೆಂಗಳೂರು: ದೆಹಲಿಯಂತೆ ಬೆಂಗಳೂರು ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಲಾಕ್ ಡೌನ್ ವಿಚಾರವಾಗಿ ಸಿಎಂ ಜೊತೆ ಚರ್ಚೆ ಮಾಡುತ್ತಿದ್ದೇವೆ. ಕಳೆದ ವರ್ಷ ಲಾಕ್ ಡೌನ್ ನಲ್ಲಿ ಜನರಿಗೆ ತೊಂದರೆ ಆಗಿದೆ. ಸರ್ಕಾರ ಯಾರ ಬದಕನ್ನೂ ಕಿತ್ತುಕೊಳ್ಳುವ ಕೆಲಸವನ್ನು ಮಾಡುವುದಿಲ್ಲ. ಜನರ ಜೀವದ ಜೊತೆಗೆ ಜೀವನ ರಕ್ಷಣೆ ಮಾಡೋದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.

ಇಂದು ಕೊರೋನಾ ಕಂಟ್ರೋಲ್ ಮಾಡುವ ಸಂಬಂಧ ಸಭೆಯನ್ನು ಮಾಡುತ್ತೇವೆ. ಇಂದಿನ ಸಭೆಯಲ್ಲಿ ಆಸ್ಪತ್ರೆಯಿಂದಲೇ ಸಿಎಂ ಯಡಿಯೂರಪ್ಪ ಭಾಗಿಯಾಗುತ್ತಾರೆ. ಸಭೆಯಲ್ಲಿ ಕರೋನಾ ಕಂಟ್ರೋಲ್ ಮಾಡಲು ನಾವು ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಸಭೆಯಲ್ಲಿ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡಲಾಗುತ್ತದೆ. ಸಭೆಯಲ್ಲಿ ಆಕ್ಸಿಜನ್ ಎಷ್ಟಿದೆ, ಔಷಧಿ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ಬೆಂಗಳೂರಿನಲ್ಲಿ ಆರ್.ಅಶೋಕ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ತನಗೆ ಪಾಸಿಟಿವ್ ಬಂದಿದೆ ಎಂದು ಬೆದರಿದ ವ್ಯಕ್ತಿ ಆಸ್ಪತ್ರೆಯಿಂದ ಪರಾರಿ..!  

ಶಿವಮೊಗ್ಗ: ತನಗೆ ಪಾಸಿಟಿವ್ ಬಂದಿದೆ ಎಂದು ಹೆದರಿ, ಸೋಂಕಿತ ವ್ಯಕ್ತಿಯೊಬ್ಬ ಭತ್ತದ ಗದ್ದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಘಟನೆ ಇಂದು ಶಿವಮೊಗ್ಗದಲ್ಲಿ ನಡೆದಿದೆ.  ಶಿವಮೊಗ್ಗದ ಎನ್.ಹೆಚ್. ಆಸ್ಪತ್ರೆ ಆವರಣದಲ್ಲಿಯೇ ಈ ಅಪರೂಪದ ಘಟನೆ ನಡೆದಿದ್ದು, ಬೇರೆ ಯಾವುದೋ...

‘ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅಧಿಕಾರ ಸ್ವೀಕಾರ’

ತಮಿಳುನಾಡು: ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ...

ಕಲಬುರಗಿಯಲ್ಲಿ ಕೊವಿಡ್ ರೋಗಿಗಳಿಗೆ ಫ್ರೀ ಆಟೋ ಸರ್ವಿಸ್..!

ಕಲಬುರಗಿ : ಕೊವಿಡ್-19 ಸೊಂಕಿತರನ್ನ ಆಸ್ಪತ್ರೆಗೆ ಕರೆದ್ಯೋಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಬೆನ್ನಲ್ಲೆ, ಕಲಬುರಗಿ ನಗರದಲ್ಲಿ ಆಟೋ ಚಾಲಕನೋರ್ವ ಮಾನವೀಯತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸೇರಿದಂತೆ ಯಾವುದೇ ತುರ್ತು ವೈದ್ಯಕೀಯ ಸಂದರ್ಭದಲ್ಲಿ ...

ಈ ವ್ಯಕ್ತಿ ಅಧಿಕಾರಿಗಳ ಮುಂದೆ ತಲೆ ಕೆಳಗೆ ಮಾಡಿ ನಿಂತಿದ್ದು ಯಾಕೆ ಗೊತ್ತಾ?

ಶಿವಮೊಗ್ಗ: ಒಂದು ಕಡೆ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.  ಮತ್ತೊಂದು ಕಡೆ ಮಾಸ್ಕ್ ಸ್ಯಾನಿಟೈಸರ್ ಬಳಕೆ ಕೂಡ ಕಡ್ಡಾಯ ಮಾಡಲಾಗಿದೆ.  ಆದರೆ ಇಲ್ಲೊಬ್ಬರು ಕೊರೋನಾನೆ ಇಲ್ಲ.  ಆರೋಗ್ಯವಂತರು ಮಾಸ್ಕ್ ಹಾಕಬೇಕೇಂದೇನೂ...

Recent Comments