ಫೆ.28ರ ನಂತರ ಅಧಿಕಾರಿಗಳ ವರ್ಗಾವಣೆ ಮಾಡುವಂತಿಲ್ಲ..!

0
250

ಬೆಂಗಳೂರು : ಲೋಕಸಭಾ ಚುನಾವಣೆಗೆ ಮುನ್ನವೇ ವರ್ಗಾವಣೆ ಪ್ರಕ್ರಿಯೆ ಮುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರ ಚುನಾವಣಾ ಆಯೋಗ, ‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅದಕ್ಕೂ ಮುನ್ನವೇ ಅಧಿಕಾರಿಗಳ ವರ್ಗಾವಣೆ ಕಾರ್ಯ ಮುಗಿಯಬೇಕು. ಫೆಬ್ರವರಿ 20ರೊಳಗೆ ವರ್ಗಾವಣೆ ಕಾರ್ಯ ಮುಗಿಸಬೇಕು. 28ರೊಳಗೆ ಎಲ್ಲಾ ಪ್ರಕ್ರಿಯೆ ಕಂಪ್ಲೀಟ್ ಆಗಬೇಕು. ಫೆ. 28ರ ಬಳಿಕ ವರ್ಗಾವಣೆ ಮಾಡುವಂತಿಲ್ಲ’ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here