Home ರಾಜ್ಯ ಇತರೆ ಬದುಕಿದ್ದವರಿಗೆ ಸಿಕ್ತು ಡೆತ್​ ಸರ್ಟಿಫಿಕೆಟ್..!​

ಬದುಕಿದ್ದವರಿಗೆ ಸಿಕ್ತು ಡೆತ್​ ಸರ್ಟಿಫಿಕೆಟ್..!​

ಗದಗ: ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಮಹಾನ್ ಯಡವಟ್ಟು ಮಾಡಿದ್ದು, ಬದುಕಿದ್ದವರಿಗೂ ಡೆತ್​ ಸರ್ಟಿಫಿಕೆಟ್​ ಕೊಟ್ಟಿರೋ ಘಟನೆ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ‌ ಗ್ರಾಮದಲ್ಲಿ ನಡೆದಿದೆ. ಜೀವಂತವಿದ್ದರೂ ಮರಣ ಪ್ರಮಾಣ ಪತ್ರವನ್ನು ನೀಡಿದ ಅಧಿಕಾರಿಗಳು, ದಾಖಲೆಗಳಲ್ಲಿ ಹಿರಿಯ ಜೀವಗಳು ಮರಣ ಹೊಂದಿರೋದಾಗಿ‌ ಉಲ್ಲೇಖಿಸಿದ್ದಾರೆ. ನಿಂಗಪ್ಪ, ನಿಂಗವ್ವ, ಮಲ್ಲಪ್ಪ ಎಂಬುವರರ ಮರಣ ಪತ್ರವನ್ನು ಅಧಿಕಾರಿಗಳು ನೀಡಿದ್ದಾರೆ.

ಗ್ರಾಮಲೆಕ್ಕಾಧಿಕಾರಿ ಶಬ್ಬೀರ್​​​ ನಿಶಾಂದಾರ್​​​ ಎಂಬವರು ಯಡವಟ್ಟು ಮಾಡಿದ್ದು, ಇದರಿಂದಾಗಿ ಹಿರಿಯ ಜೀವಗಳು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ನಾಲ್ಕೈದು ತಿಂಗಳಿನಿಂದ ವೃದ್ಧಾಪ್ಯ ವೇತನವೂ ಬಂದಿಲ್ಲ. ಅಧಿಕಾರಿಗಳ ಯಡವಟ್ಟಿನಿಂದ ಬರುತ್ತಿದ್ದ ಪೆನ್ಶನ್ ಕೂಡಾ ನಿಂತು ತುತ್ತು‌ ಅನ್ನಕ್ಕಾಗಿ ಪರದಾಡುವಂತಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments