ಶಿವಮೊಗ್ಗ : ನೂತನ ಪಿಂಚಣಿ ಯೋಜನೆ ಕೈಬಿಟ್ಟು ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಬೇಕೆಂದು, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜ್ಯಸರ್ಕಾರಕ್ಕೆ ಆಗ್ರಹಿಸಿದ್ದಾರೆ. 2004ರ ಪೂರ್ವದಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ, ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟು ತೊಂದರೆ ಅನುಭವಿಸುತ್ತಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಲಕ್ಷಾಂತರ ನೌಕರರ ಬಹುಕಾಲದ ಬೇಡಿಕೆಗೆ ಮನ್ನಣೆ ನೀಡಿ, ಎನ್.ಪಿ.ಎಸ್. ನಿಂದ ಹೊರಬಂದು ಹಳೇ ಪಿಂಚಣಿ ಯೋಜನೆ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವನ್ನು ರಾಜ್ಯ ಸರ್ಕಾರವೂ ಸಹ ಪಾಲಿಸಬೇಕು ಎಂದಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಆದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಕ್ಷಾಂತರ ನೌಕರರಿಗೆ ನ್ಯಾಯ ಸಿಕ್ಕಿದೆ. ಎನ್ಪಿಎಸ್ನ್ನು ರಾಜ್ಯ ಸರ್ಕಾರ ಯಥಾವತ್ತಾಗಿ 2006ರ ಏಪ್ರಿಲ್ 1 ರಿಂದ ಜಾರಿಗೆ ತಂದಿದೆಯಾದರೂ ಕೇಂದ್ರ ಜಾರಿಗೆ ತಂದಿರುವ ಸುಧಾರಣಾ ಕ್ರಮಗಳನ್ನು ಈವರೆಗೂ ಜಾರಿಗೊಳಿಸಿಲ್ಲ. ಆದ್ದರಿಂದ ಕೇಂದ್ರದ ಸುಧಾರಣಾ ಆದೇಶಗಳನ್ನು ಜಾರಿಗೆ ತರುವುದರ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.
2004ರ ಜನವರಿ 1ರ ಪೂರ್ವದಲ್ಲಿ ಉದ್ಯೋಗಕ್ಕೆ ಸೇರಿ ರಾಜೀನಾಮೆ ಕೊಟ್ಟು ನಂತರ ಪುನಃ ಮತ್ತೊಂದು ಹುದ್ದೆಗೆ ಹೊಸದಾಗಿ ಆಯ್ಕೆಯಾಗಿರುವ ಕೇಂದ್ರ ಸರ್ಕಾರಿ ನೌಕರರ ಹಿಂದಿನ ಸೇವೆ ಪರಿಗಣಿಸಿ ಹಳೇ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸಬಹುದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ರು.
2006ರ ಎಪ್ರಿಲ್ 1 ರಿಂದ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರ ವೇತನದಲ್ಲಿ ಶೇ.10 ರಷ್ಟು ಹಾಗೂ ಶೇ.10 ರಷ್ಟು ಹಣವನ್ನು ಸೇರಿಸಿ ಒಟ್ಟು ಶೇ.20 ರಷ್ಟು ಹಣವನ್ನು ಸರ್ಕಾರ ಷೇರುಪೇಟೆಯಲ್ಲಿ ಹೂಡಿಕೆ ಮಾಡಿದ್ದು, ಒಂದು ವೇಳೆ ಷೇರು ಪೇಟೆ ಕುಸಿದಿದ್ದಲ್ಲಿ ನೌಕರರಿಗೆ ವೇತನ ನೀಡಲು ಕಷ್ಟವಾಗುತ್ತದೆ. ಆದ್ದರಿಂದ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕೊರೋನಾದಿಂದಾಗಿ ಮೂರು ತಿಂಗಳ ವೇತನವಿಲ್ಲ. ಅತಿಥಿ ಉಪನ್ಯಾಸಕರು ಜೀವನ ನಿರ್ವಹಿಸುವುದು ಕಷ್ಟವಾಗಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಬೇಕೆಂದು ಇದೇ ವೇಳೆ ಒತ್ತಾಯಿಸಿದ್ರು.
buying zithromax online
buy zithromax 250 mg