ಹುಮನಾಬಾದ್: ಪ್ರತಿಭಟನೆ ಕೈಬಿಟ್ಟು ಬಸ್ ಓಡಿಸಲು ಸಾರಿಗೆ ನೌಕರರು ಮುಂದೆ ಬಂದರೆ ಅವರಿಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹುಮನಾಬಾದ್ ನಲ್ಲಿ ಹೇಳಿದ್ದಾರೆ.
ನಾಲ್ಕು ಸಾರಿಗೆ ನಿಗಮಗಳ ಎಂಡಿಗಳ ಜೊತೆ ಮಾತನಾಡಿದ್ದೇನೆ. ಎಲ್ಲಾ ಎಸ್ ಪಿ, ಡಿಜಿಗೆ ಸೂಚನೆ ನೀಡಲಾಗಿದೆ. ಸ್ವಯಂ ಪ್ರೇರಿತವಾಗಿ ಕರ್ತವ್ಯಕ್ಕೆ ಬಂದರೆ ಪ್ರೊಟೆಕ್ಷನ್ ನೀಡುತ್ತೇವೆ. ನೀತಿ ಸಂಹಿತೆ ಮುಗಿದ ಬಳಿಕ ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳೋಣ. ಬಡವರು, ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಕೈ ಮುಗಿದು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ ಕರ್ತವ್ಯಕ್ಕೆ ಹಾಜರಾಗಿ ಎಂದು ಮನವಿ ಮಾಡಿದ್ದಾರೆ.