Home uncategorized ಲಾಕ್ ಡೌನ್ ದಿನ ಆನ್ ಲೈನ್ ಮೂಲಕ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಮಹಿಳೆಯರು

ಲಾಕ್ ಡೌನ್ ದಿನ ಆನ್ ಲೈನ್ ಮೂಲಕ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಮಹಿಳೆಯರು

ಹಾವೇರಿ : ವಿಡಿಯೋ ಕಾಲ್​​​ ಮಾಡಿ ಸುರಕ್ಷಿತವಾಗಿ ಸ್ಥಳೀಯ ಮಹಿಳೆಯರೆ ಹೆರಿಗೆ ಮಾಡಿಸಿದ ಘಟನೆ ನಡೆದಿದೆ.ಹಾನಗಲ್ ಪಟ್ಟಣದ ಕಿತ್ತೂರು ಚೆನ್ನಮ್ಮ ಓಣಿಯ ಮಹಿಳೆಯರು ಹುಬ್ಬಳ್ಳಿ ಕಿಮ್ಸ್​​​ನಲ್ಲಿ ಕೆಲಸ ಮಾಡುತ್ತಿದ್ದ ಡಾ. ಪ್ರಿಯಾಂಕ ಅವರಿಗೆ ವಿಡಿಯೋ ಕಾಲ್ ಮಾಡಿ ಅವರ ಮಾರ್ಗದರ್ಶನದಂತೆ ಹೆರಿಗೆ ಮಾಡಿಸಿದ್ದಾರೆ.ಭಾನುವಾರದ ಲಾಕ್​​ಡೌನ್ ಹಿನ್ನೆಲೆ ಹಾನಗಲ್ ನ ಇಡೀ ಪಟ್ಟಣವೆ ಸ್ತಬ್ಧವಾಗಿದ್ದ ಸಂದರ್ಭದಲ್ಲಿ ಪಟ್ಟಣದ ಕಿತ್ತೂರು ಚೆನ್ನಮ್ಮ ಓಣಿಯ ಮಹಿಳೆಯರು ಸೇರಿಕೊಂಡು ಗರ್ಭಿಣಿಯೊಬ್ಬರಿಗೆ ಹೆರಿಗೆ ಮಾಡಿಸಿದ್ದಾರೆ.ಅಂದು ವಿಡಿಯೋ ಕಾಲ್ ಮೂಲಕ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.ಭಾನುವಾರ ಮದ್ಯಾಹ್ನ 2:30ರ ಸುಮಾರಿಗೆ ಪತ್ತೆಪೂರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು.ಮಹಿಳೆಯ ಆಕ್ರಂದನ ಮತ್ತು ಕಿರುಚುವುದನ್ನ ಕಂಡ ಸ್ಥಳೀಯ ಮಹಿಳೆಯರು ಸಹಾಯಕ್ಕೆ ಧಾವಿಸಿದ್ದಾರೆ. ಆಗಲೇ ಮಗು ಅರ್ಧ ಹೊರ ಬಂದು ಕಣ್ಣು ತೆರೆದಿತ್ತು. ಸಮಯಪ್ರಜ್ಞೆ ಮೆರೆದ ಮಹಿಳೆಯರು, ಹುಬ್ಬಳ್ಳಿ ಕಿಮ್ಸ್​​​​ನಲ್ಲಿ ಕೆಲಸ ಮಾಡುತ್ತಿದ್ದ ಡಾ. ಪ್ರಿಯಾಂಕ ಅವರಿಗೆ ವಿಡಿಯೋ ಕಾಲ್ ಮಾಡಿ ಅವರ ಮಾರ್ಗದರ್ಶನದಂತೆ ಹೆರಿಗೆ ಮಾಡಿಸಿದ್ದಾರೆ.ಶಸ್ತ್ರ ಚಿಕಿತ್ಸೆಯಲ್ಲಿದ್ದ ಡಾ.ಪ್ರಿಯಾಂಕ ಮಹಿಳೆಯರಿಗೆ ಮಾರ್ಗದರ್ಶನ ಮಾಡಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಲಾಕ್​​ಡೌನ್ ಸಂದರ್ಭದಲ್ಲಿ ಎಲ್ಲಾ ಆಸ್ಪತ್ರೆಗಳು ಬಂದ್ ಇರುವ ಕಾರಣ ಮಹಿಳೆಯರು ಮನೆಯಲ್ಲೇ ವೈದ್ಯರ ಸಲಹೆಯಂತೆ ಹೆರಿಗೆ ಮಾಡಿಸಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ. ಇದೀಗ ಮಗು ಮತ್ತು ತಾಯಿ ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments