Home ರಾಜ್ಯ ಕೊರೋನಾ ಔಷಧಿ ಹೆಸರಲ್ಲಿ ಆನ್​ಲೈನ್​ ವಂಚನೆ ..!

ಕೊರೋನಾ ಔಷಧಿ ಹೆಸರಲ್ಲಿ ಆನ್​ಲೈನ್​ ವಂಚನೆ ..!

ಬೆಂಗಳೂರು :  ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಡೀ ಜಗತ್ತು ಹೆಮ್ಮಾರಿ ವೈರಸ್​ನಿಂದ ಹೈರಾಣಾಗಿದೆ.  ಜನ ಆತಂಕಕ್ಕೆ ಒಳಗಾಗಿದ್ದಾರೆ… ಜನರ ಈ ಭಯವನ್ನೇ ಬಂಡವಾಳ ಮಾಡಿಕೊಂಡು ಕೆಲವು ವಿದೇಶಿಗರು ಕೋಟ್ಯಂತರ ರೂ ವಂಚಿಸಿರೋ ಪ್ರಕರಣ ನಮ್ಮ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.

ಜಯನಗರದಲ್ಲಿ ವಾಸವಿದ್ದ ವಿದೇಶಿ ವಂಚಕರು, ಕೊರೋನಾ ಔಷಧ ಕೊಡ್ತೀವಿ ಅಂತ ಆನ್​​ಲೈನ್​ ಮೂಲಕ ಪ್ರಚಾರ ಮಾಡಿ, 10ಕ್ಕೂ ಹೆಚ್ಚು ವೆಬ್​ಸೈಟ್​ ಗಳನ್ನು ತೆರೆದು ಕೊರೋನಾಗೆ ಔಷಧಕೊಡ್ತೀವಿ ಅಂತ  ಯಾಮಾರಿಸಿದ್ದಾರೆ. ಇವರ ಈ ಹಸಿ ಹಸಿ ಸುಳ್ಳನ್ನೇ ನಂಬಿದ ಅಮಾಯಕರು ಅವರ ಬಳಿ ಔಷಧಕೊಳ್ಳಲು ಹೋದಾಗ ಅವರ ಅಕೌಂಟ್ ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಂಚಕರು ಬ್ಯುಸ್​ನೆಸ್ ವೀಸಾದಲ್ಲಿ  ಬಂದಿದ್ದು, ಅವಧಿ ಮುಗಿದರೂ ಇಲ್ಲಿಯೇ ನೆಲೆಸಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments