Home P.Cricket ಇಂಟರ್ ನ್ಯಾಷನಲ್ 1ಲಕ್ಷ ರೈತರಿಂದ ನಾಳೆ ಪಾರ್ಲಿಮೆಂಟ್​ ಮುಂದೆ ಪ್ರತಿಭಟನೆ

1ಲಕ್ಷ ರೈತರಿಂದ ನಾಳೆ ಪಾರ್ಲಿಮೆಂಟ್​ ಮುಂದೆ ಪ್ರತಿಭಟನೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಬೇಕು, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಸೆಷನ್ ನಡೆಸಬೇಕು ಎಂಬ ಬೇಡಿಕೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 1ಲಕ್ಷಕ್ಕೂ ಹೆಚ್ಚು ರೈತರು ಪ್ರತಿಭಟನಾ ರ‍್ಯಾಲಿ ಆರಂಭಿಸಿದ್ದಾರೆ. ನಾಳೆ ಇವರು ಪಾರ್ಲಿಮೆಂಟ್​ಗೆ​ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ಇಂದು ದೆಹಲಿ ಹೊರವಲಯದ ಬ್ರಿಜ್ವಾಸನ್​​ನಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಕೃಷಿಕರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಪಾರ್ಲಿಮೆಂಟ್ ಸೆಷನ್ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಭಾರತೀಯ ಕಿಸಾನ್​ ಸಂಘರ್ಷ ಸಹಕಾರ ಸಮಿತಿ(ಎಐಕೆಎಸ್​ಸಿಸಿ)ಯ ನೇತೃತ್ವದಲ್ಲಿಆರಂಭವಾಗಿರುವ ರ‍್ಯಾಲಿ ನಾಳೆ ರಾಮ್​ಲೀಲಾ ಮೈದಾನ ತಲುಪಲಿದೆ.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಬೇಕೆಂಬ ಬೇಡಿಕೆಯೊಂದಿಗೆ ಕೃಷಿಕರು ನಾಳೆ(ನ.30) ಪಾರ್ಲಿಮೆಂಟ್​​ ಎದುರು ಪ್ರತಿಭಟನೆ ನಡೆಸಲಿದ್ದಾರೆ. ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕೃಷಿಕರ ಸಮಸ್ಯೆಗಳನ್ನು ಪರಿಹರಿಸುವುದರ ಕುರಿತು ಚರ್ಚಿಸಲೆಂದೇ ವಿಶೇಷ ಸೆಷನ್ ನಡೆಸಬೇಕು ಅನ್ನೋದು ಪ್ರತಿಭಟನಾಕಾರರ ಒತ್ತಾಯ.

ಸ್ವರಾಜ್​ ಅಭಿಯಾನದ ಮುಖಂಡ ಯೋಗೇಂದ್ರ ಯಾದವ್​ ಈ ಪ್ರತಿಭಟನೆ ನೇತೃತ್ವ ವಹಿಸಿದ್ದಾರೆ. 25 ಕಿ.ಮೀ ಪ್ರತಿಭಟನಾ ರ್ಯಾಲಿ ಇದಾಗಿದ್ದು, ಬ್ರಿಜ್ವಾಸನ್​ನಿಂದ ಆರಂಭವಾಗಿ ಮಜ್ನುಕಾ ಟಿಲಾ,ನಿಝಾಮುದ್ದೀನ್​, ಆನಂದ ವಿಹಾರದ ಮೂಲಕ ಹಾದು ಬರಲಿದೆ.

ಹಾಗೆಯೇ ಇಂದು ಸಂಜೆ ಕೃಷಿಕರಿಗಾಗಿ ನಡೆಯಲಿರೋ ‘ಏಕ್​ ಶ್ಯಾಮ್ ಕಿಸಾನ್​ ಕೆ ನಾಮ್’(ಕೃಷಿಕರಿಗಾಗಿ ಒಂದು ಸಂಜೆ) ಕಾರ್ಯಕ್ರಮದಲ್ಲಿ ಗಾಯಕರು, ಕವಿಗಳು, ಬರಹಗಾರರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments