Friday, September 30, 2022
Powertv Logo
Homeರಾಜ್ಯಪಾದರಾಯನಪುರ ಗಲಾಟೆ ಸಂಬಂಧ ತುರ್ತು ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಪಾದರಾಯನಪುರ ಗಲಾಟೆ ಸಂಬಂಧ ತುರ್ತು ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆ ಹಿನ್ನೆಲೆ ಮಧ್ಯರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಘಟನೆ ಬಗ್ಗೆ ತೀರ್ಮಾನ ತೆಗೆದುಕೊಂಡಿರುವ ಅವರು ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ಗೆ ಆದೇಶಿಸಿದ್ದಾರೆ.

ನಗರದಲ್ಲಿ ಆಗಾಗ ಈ ರೀತಿಯ ಘಟನೆ ನಡೆಯುತ್ತಲೇ ಇದೆ. ಇನ್ನುಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯಬಾರದು. ಹಾಗಾಗಿ ಅಗತ್ಯವಿರುವ ಪ್ರದೇಶಗಳಲ್ಲಿ ಬಂದೋಬಸ್ತ್ ಮಾಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಭಾಸ್ಕರ್ ರಾವ್​ಗೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments