Home ದೇಶ-ವಿದೇಶ ಪಾಕ್​ ವಶದಲ್ಲಿರುವ ಅಭಿನಂದನ್ ನಾಳೆ ಬಿಡುಗಡೆ..!

ಪಾಕ್​ ವಶದಲ್ಲಿರುವ ಅಭಿನಂದನ್ ನಾಳೆ ಬಿಡುಗಡೆ..!

ನವದೆಹಲಿ: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್​ ಅಭಿನಂದನ್​ ಅವರನ್ನು ನಾಳೆ ಬಿಡುಗಡೆ ಮಾಡಲಾಗುತ್ತೆ ಅಂತ ಪಾಕಿಸ್ತಾನ ಹೇಳಿದೆ. ಪಾಕ್​ ಸಂಸತ್​ನಲ್ಲಿ ಮಾತನಾಡಿದ ಪ್ರಧಾನಿ ಇಮ್ರಾನ್​ ಖಾನ್​ ನಾಳೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಾಗುತ್ತೆ ಅಂತ ತಿಳಿಸಿದ್ದಾರೆ. “ತಕ್ಷಣವೇ ನಮ್ಮ ಪೈಲಟ್​ ಅಭಿನಂದನ್​ ಅವರನ್ನು ಬಿಡುಗಡೆ ಮಾಡಬೇಕು. ಈ ವಿಚಾರದಲ್ಲಿ ನೋ ಡೀಲ್ ಅಂತ ಭಾರತ ಖಡಕಕ್ಕಾಗಿ ಪಾಕ್​ಗೆ ವಾರ್ನ್​ ಮಾಡಿತ್ತು. ಭಾರತ ಪಾಕ್​ ಮೇಲೆ ಒತ್ತಡ ಹೇರಿರುವ ಬೆನ್ನಲ್ಲೇ ಪ್ರಧಾನಿ ಇಮ್ರಾನ್​ ಖಾನ್ ಅಭಿನಂದನ್​ ಬಿಡುಗಡೆ ವಿಚಾರವನ್ನು ಘೋಷಿಸಿದ್ದಾರೆ.

ಭಾರತದ ವಾಯುಪಡೆಯ ವಿಂಗ್​ ಕಮಾಂಡರ್​ ಅಭಿನಂದನ್ ಅವರು ಸುರಕ್ಷಿತವಾಗಿದ್ದಾರೆ. ಅವರನ್ನು ಸುರಕ್ಷಿತವಾಗಿ ನೋಡಿಕೊಳ್ಳಲಾಗುತ್ತೆ. ಪುಲ್ವಾಮಾ ದಾಳಿ ಸಂಬಂಧ ಭಾರತ ನೀಡಿದ ಸಾಕ್ಷ್ಯಗಳು ಸಿಕ್ಕಿವೆ. ಈ ಬಗ್ಗೆ ಮಾತುಕತೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ಪಾಕ್ ವಿದೇಶಾಂಗ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಭಾರತ ಅಭಿನಂದನ್​ ವಿಚಅರದಲ್ಲಿ ಡೀಲ್ ಮಾಡೋದಿಲ್ಲ. ಅವರನ್ನು ತಕ್ಷಣ ಕಳುಹಿಸಬೇಕು. ಕೌನ್ಸಿಲರ್​ ಮಟ್ಟದ ಚರ್ಚೆಯೇ ಬೇಕಿಲ್ಲ ಅಂತ ಪಾಕ್​ಗೆ ಎಚ್ಚರಿಸಿದೆ.

ಉಗ್ರರನ್ನು ನಾಶ ಮಾಡುವುದೇ ಭಾರತದ ಗುರಿ ಆಗಿದೆ. ಪಾಕಿಸ್ತಾನದಲ್ಲಿ ಇರುವ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಬೇಕಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯ ಒಗ್ಗಟ್ಟು ತೋರಬೇಕು. ಒಂದು ವೇಳೆ ಜಾಗತಿಕ ಬೆಂಬಲ ಸಿಗದಿದ್ದರೂ ಭಾರತ ಸುಮ್ಮನಿರುವುದಿಲ್ಲ ಅಂತ ಪಾಕ್​ಗೆ ಕೇಂದ್ರ ಎಚ್ಚರಿಸಿದೆ. ಹಾಗೇ ಯಾವುದೇ ಚರ್ಚೆ ಇಲ್ಲದೆಯೇ ಅಭಿನಂದನ್​ ಬಿಡುಗಡೆಗೆ ಆಗ್ರಹಿಸಿದೆ. ಗೃಹ ಸಚಿವ ರಾಜನಾಥ್​ ಸಿಂಗ್​ ನೇತೃತ್ವದಲ್ಲಿ ಸಭೆ ನಡೆದಿದ್ದು, ನಂತರ ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವಾಲಯದಿಂದ ಒತ್ತಾಯ ಹೇರಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments