Friday, September 30, 2022
Powertv Logo
Homeರಾಜ್ಯವಿವಿಧ ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ಪಂಚಾಯತಿಯ ನೌಕರರ ಮನವಿ

ವಿವಿಧ ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ಪಂಚಾಯತಿಯ ನೌಕರರ ಮನವಿ

ವಿಜಯಪುರ : ಗ್ರಾಮ ಪಂಚಾಯಿತಿ ನೌಕರರಿಗೆ 15ನೇ ಹಣಕಾಸಿನ ಆಯೋಗ ದಲ್ಲಿ ವೇತನ ಪಾವತಿಸಬೇಕು ಹೀಗೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಪರ ಸಂಘಟನೆ ಹಾಗೂ ವಿವಿಧ ನೌಕರರ ಸಂಘದ ವತಿಯಿಂದ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರಿಗೆ ಇಲ್ಲಿಯವರೆಗೆ ವೇತನ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತೆರಿಗೆ ವಸೂಲಾತಿ ಶೇ.40 ರಷ್ಟು ಹಣವನ್ನು ಬಾಕಿ ಉಳಿದ ವೇತನ ಪಾವತಿಸಬೇಕು. ನಿವೃತ್ತರಾದವರಿಗೆ ಗ್ರಾಜ್ಯೂಟಿ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಜಿಪಂ ಸಿಇಒ ಅವರಿಗೆ ಲಿಖಿತ ಮನವಿ ಸಲ್ಲಿಸಿದರು. ನಂತರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ, ರೈತ ಸಂಘದ ಮುಖಂಡ ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ, ಎಂ.ಕೆ.ಚಳ್ಳಗಿ, ಅಬ್ದುಲ್ ತಮದಡ್ಡಿ, ವಿಠ್ಠಲ ಹೊನಮೋರೆ, ಕುಮಾರ ರಾಠೋಡ ಸೇರಿದಂತೆ ಹಲವು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು…

23 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments