Home uncategorized ಬೆಂಗಳೂರು, ಮೈಸೂರಿಂದ ನಮ್ಮೂರಿಗೆ ಯಾರೂ ಬರಂಗಿಲ್ಲ | ಬಂದ್ರೆ 5 ಸಾವಿರ ರೂ. ದಂಡ..!

ಬೆಂಗಳೂರು, ಮೈಸೂರಿಂದ ನಮ್ಮೂರಿಗೆ ಯಾರೂ ಬರಂಗಿಲ್ಲ | ಬಂದ್ರೆ 5 ಸಾವಿರ ರೂ. ದಂಡ..!

ಮಂಡ್ಯ : ನಮ್ಮ ಗ್ರಾಮಕ್ಕೆ ಬೆಂಗಳೂರು, ಮೈಸೂರಿನಿಂದ ಯಾರೂ ಬರೋ ಹಾಗಿಲ್ಲ. ಒಂದೊಮ್ಮೆ ಬಂದರೆ 5 ಸಾವಿರ ರೂ. ದಂಡ ವಿಧಿಸಲು ಗ್ರಾಮಸ್ಥರು ನಿರ್ಧಾರ ಮಾಡಿ ಟಾಂಟಾಂ ಹೊಡೆಸಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಕೊರೋನಾ ನಿಯಂತ್ರಣಕ್ಕಾಗಿ ಈ ನಿರ್ಧಾರ ಮಾಡಲಾಗಿದ್ದು, ಟಾಂಟಾಂ ಹೊಡೆದು ವ್ಯಕ್ತಿಯೊಬ್ಬ ಗ್ರಾಮದಲ್ಲಿ ಹೇಳಿಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌. ಗ್ರಾಮದ ಮುಖಂಡರು ಒಂದೆಡೆ ಕುಳಿತು ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಆದರೆ ಆ ಗ್ರಾಮ ಯಾವುದು ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ರೀತಿಯ ಫರ್ಮಾನು ಹೊರಡಿಸಲಾಗಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರಾಮಸ್ಥರು ಸೈ ಎಂದಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕೊರೋನಾ ನಿಯಂತ್ರಣ ಮಾಡಲು ಹೊರಗಿನವರ ಪ್ರವೇಶಕ್ಕೆ ನಿಷೇಧ ಮಾಡಲಾಗುತ್ತಿದೆ. ಇದು ಕೇವಲ ಒಂದು ತುಣುಕಾಗಿದ್ದು, ಮತ್ತಷ್ಟು ಗ್ರಾಮಗಳಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments