Home ರಾಜ್ಯ ಬೆಂಗಳೂರು ವೀರಪುತ್ರ ಅಭಿನಂದನ್​ಗಾಗಿ ರಾಜ್ಯದೆಲ್ಲೆಡೆ ಪ್ರಾರ್ಥನೆ..!

ವೀರಪುತ್ರ ಅಭಿನಂದನ್​ಗಾಗಿ ರಾಜ್ಯದೆಲ್ಲೆಡೆ ಪ್ರಾರ್ಥನೆ..!

ಭಾರತದ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್‌ಗಾಗಿ ಎಲ್ಲಡೆ ಪ್ರಾರ್ಥನೆ, ಪೂಜೆಗಳು ನಡೆಯುತ್ತಿವೆ. ಪಾಪಿ ಪಾಕ್​ನಲ್ಲಿ ಒತ್ತೆಯಾಳಾಗಿ ಸಿಕ್ಕಿಹಾಕಿಕೊಂಡಿರೋ ವೀರಪುತ್ರ ಸುರಕ್ಷಿತವಾಗಿ ವಾಪಾಸಾಗಲು ಪೂಜೆ, ಪ್ರಾರ್ಥನೆ ನಡೆಯುತ್ತಿದೆ. ದೇಶದ ವೀರಪುತ್ರ ಕ್ಷೇಮವಾಗಿ ಮರಳಿ ಬರಲಿ ಅಂತ ಕರುನಾಡ ಮಂದಿ ಪೂಜೆ ಮಾಡುತ್ತಿದ್ದಾರೆ.

ಬೆಂಗಳೂರು: ಅಭಿನವ್​ಗಾಗಿ ಬೆಂಗಳೂರಿನ ದೊಡ್ಡ ಗಣಪತಿ ದೇವಾಲಯದಲ್ಲೂ ವಿಶೇಷ ಪೂಜೆ ನಡೆದಿದೆ. ಗಂಗಾ ಹಾಗೂ ಕಾವೇರಿ ಜಲದಿಂದ ವಿಶೇಷ ಅಭಿಷೇಕ ಮಾಡಲಾಗಿದ್ದು, ಅಭಿನವ್​ಗೋಸ್ಕರ ಪ್ರಾರ್ಥಿಸಿದ್ದಾರೆ.

ಶಿವಮೊಗ್ಗ: ಪಾಕ್ ವಶದಲ್ಲಿರುವ  ಭಾರತೀಯ ವೀರಪುತ್ರ ಅಭಿನಂದನ್​ ಅವರಿಗಾಗಿ ದೇಶದೆಲ್ಲೆಡೆ ಪ್ರಾರ್ಥಿಸುತ್ತಿದ್ದಾರೆ. ಶಿವಮೊಗ್ಗದಲ್ಲೂ ಕೂಡ ಅಭಿನಂದನ್‌ ಬಿಡುಗಡೆಗಾಗಿ ಉರುಳು ಸೇವೆ ಸಲ್ಲಿಸುವ ಮೂಲಕ ಜನ ದೇವರ ಮೊರೆ ಹೋಗಿದ್ದಾರೆ. ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ  ಉರುಳುಸೇವೆ ಸಲ್ಲಿಸಿದ್ದು,ಆದಷ್ಟು ಬೇಗ  ಪೈಲಟ್ ಅಭಿನಂದನ್ ಬಿಡುಗಡೆಗೆ ಆಗಲಿ, ಅವರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ.

ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಗಣಪತಿ ದೇವಸ್ಥಾನದಲ್ಲಿಯೂ ವಿಶೇಷ ಪೂಜೆ ನೆರವೇರಿಸಲಾಗಿದೆ. ವೀರಪುತ್ರ ಅಭಿನಂದನ್​ ಕ್ಷೇಮವಾಗಿ ಬರಲಿ ಎಂದು ಪ್ರಾರ್ಥನೆ ಸಲ್ಲಿಸಿ ಪೂಜೆ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರು  ಹಾಗೂ ನಾಗರಿಕರು ಅಭಿನವ್​ ಸುರಕ್ಷೆಗಾಗಿ ದೇವರ ಮೊರೆ ಹೋಗಿದ್ದಾರೆ.

ಕೊಪ್ಪ: ತಾಲೂಕಿನ ವೀರಭದ್ರೇಶ್ವರ ದೇವಾಲಯದಲ್ಲೂ ಸಹ ಪೂಜೆ ಸಲ್ಲಿಸಲಾಯ್ತು. ಇನ್ನು ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ನೇತೃತ್ವದಲ್ಲಿ ಪೂಜೆ ನೆರವೇರಿದ್ದು, ಅಭಿನಂದನ್​ ಸುರಕ್ಷಿತವಾಗಿ ಬಿಡುಗಡೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯ್ತು.

ಗಂಗಾವತಿ: ಕೊಪ್ಪಳದಲ್ಲಿ ಪೈಲಟ್​ ಅಭಿನಂದನ್​​ ಸುರಕ್ಷೆಗಾಗಿ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ. ಗಂಗಾವತಿಯ ವಿದ್ಯಾನಿಕೇತನ್ ಕಾಲೇಜಿನಲ್ಲಿ ವಿಶೇಷ ಪೂಜೆ ನಡೆದಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

Recent Comments