ಸಾರಿಗೆ ಸಚಿವ ತಮ್ಮಣ್ಣ ಮನೆಗೆ ಮುತ್ತಿಗೆ

0
216

ಮಂಡ್ಯ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮನೆಗೆ ಮುತ್ತಿಗೆ ಮಾಲಗಾರನಹಳ್ಳಿ, ಉಪ್ಪಾರದೊಡ್ಡಿ, ಅಜ್ಜಹಳ್ಳಿ ಜನ ಮುತ್ತಿಗೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿರುವ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿದ ಗ್ರಾಮಸ್ಥರು ರೈತರ ಬೆಳೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ.

ನೀರಾವರಿ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದು ಸಚಿವ ಡಿ.ಸಿ. ತಮ್ಮಣ್ಣ ಅವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಅಂತ ಹೇಳಿದ್ದಾರೆ. “ನಾಲೆಗಳಲ್ಲಿ ನೀರು ಹರಿಸದೆ ರೈತರ ಬೆಳೆ ನಾಶವಾಗ್ತಿದೆ. ಸಂಜೆ ವೇಳೆಗೆ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸಲಾಗುತ್ತದೆ” ಅಂತ ಜನ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here