Home ರಾಜ್ಯ ‘ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ. ದರ ಏರಿಕೆಗೆ ಕಾಂಗ್ರೆಸ್ ಮುಖಂಡರಿಂದ ಖಂಡನೆ ‘

‘ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ. ದರ ಏರಿಕೆಗೆ ಕಾಂಗ್ರೆಸ್ ಮುಖಂಡರಿಂದ ಖಂಡನೆ ‘

ಶಿವಮೊಗ್ಗ: ಗ್ಯಾಸ್ ಸಿಲಿಂಡರ್ ಹೊತ್ತು ಇಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್, ಜಿಲ್ಲಾಡಳಿತದ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಹೊರೆಯಾಗುವಂತೆ ಮಾಡಿದೆ ಎಂದು ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು. ಎರಡು ವಾರಗಳ ಹಿಂದೆ ಗೃಹಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿತ್ತು.  ಈಗ ಮತ್ತೊಮ್ಮೆ ದರ ಹೆಚ್ಚಳ ಮಾಡಿ ಕಳೆದ 15 ದಿನದಲ್ಲಿ 100 ರೂ. ಏರಿಕೆ ಮಾಡಲಾಗಿದೆ.  ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ.  ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ನೀಡಿದಂತಾಗಿದೆ.

 ಕೊರೋನಾದಿಂದ ಆರ್ಥಿಕ ಬಿಕ್ಕಟ್ಟು, ಹಣದುಬ್ಬರ ಹೆಚ್ಚಳದಿಂದ ಹೈರಾಣಾಗಿರುವ ಸಾಮಾನ್ಯರಿಗೆ  ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್‍ ಗಳಿಗೆ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು ಕಳೆದ 6 ತಿಂಗಳಿಂದ ನಿಲ್ಲಿಸಲಾಗಿದೆ. ಸಿಲಿಂಡರ್ ದರ ಮಾತ್ರ ಭಾರೀ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

 ಒಂದು ತಿಂಗಳ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರೀ ಏರಿಕೆಯಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಮತ್ತು ಲಾರಿ, ಬಸ್, ಟ್ಯಾಕ್ಸಿ ಮಾಲೀಕರಿಗೆ ಬಿಸಿ ತಟ್ಟಿದೆ. ಆದರೂ ನಿತ್ಯ ದರ ಏರುಗತಿಯಲ್ಲಿ ಸಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿರುವುದರಿಂದ ರೈತರು ಸೇರಿ ಬಡ ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿ ಹಣದುಬ್ಬರಕ್ಕೆ ಕಾರಣವಾಗಿದೆ. ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಸರಕು ಸಾಗಾಣೆ ದರಗಳ ಹೆಚ್ಚಳವಾಗಿ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೃಷಿ ಮತ್ತು ಮಾರಾಟ ಕಾರ್ಯದಲ್ಲಿ ತೊಡಕು ಉಂಟಾಗಿ ಅರ್ಥವ್ಯವಸ್ಥೆಗೆ ಧಕ್ಕೆ ಬಂದಿದೆ. ತೈಲ, ಅಡುಗೆ ಅನಿಲ ದರ ಏರದಂತೆ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸರ್ಕಾರದ ಹೊಣೆಗಾರಿಕೆ ಮತ್ತು ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಾಮಾನ್ಯ ಜನರು ಪ್ರತಿಭಟನೆ ಮಾಡಲು ಸರ್ಕಾರವೇ ಅವಕಾಶ ನೀಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments