ಶಿವಮೊಗ್ಗ : ಪೆಟ್ರೋಲ್ ಮತ್ತು ಡೀಸೇಲ್ ಬೆಲೆ ಏರಿಕೆ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ದೇಶದಾದ್ಯಂತ, ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಮತ್ತು ಡೀಸೇಲ್ ದರ ಏರಿಕೆಯಾಗುತ್ತಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಕೂಡ ಕೇಂದ್ರ ಸರ್ಕಾರ, ಎಕ್ಸೈಜ್ ಸುಂಕವನ್ನು ಹೆಚ್ಚಿಸಿದೆ ಎಂದು ಆಪಾದಿಸಿದ್ದಾರೆ. ಈಗಾಗಲೇ, ಕೊರೊನಾ ಲಾಕ್ ಡೌನ್ ಸಮಸ್ಯೆಯಿಂದಾಗಿ ತತ್ತರಿಸಿರುವ ದೇಶದ ಶ್ರೀ ಸಾಮಾನ್ಯನ ಮೇಲೆ ಹೊರೆ ಹಾಕುತ್ತಿರುವುದು ಎಷ್ಟು ಸರಿ ಎಂದು ಖಂಡಿಸಿದ್ದಾರೆ. ಜೂ. 8 ರವರೆಗೆ, 76.44 ಪೈಸೆ ಇದ್ದ ಪೆಟ್ರೋಲ್ ದರ, ದಿನದಿಂದ ದಿನಕ್ಕೆ ಏರಿಕೆಯಾಗಿ, ಐದು ರೂಪಾಯಿಗೂ ಹೆಚ್ಚು ಏರಿಕೆ ಕಂಡಿದ್ದು, ಮೊದಲೇ ಕೊರೊನಾ ಸಂಕಷ್ಟದಲ್ಲಿರುವ ಜನತೆಗೆ ಕೇಂದ್ರ ಸರ್ಕಾರ ಮತ್ತಷ್ಟು ಹೊರೆಯಾಗುವಂತೆ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ. ಪೆಟ್ರೋಲ್, ಡೀಸೇಲ್ ಬೆಲೆ ಏರಿಕೆಯಾದರೆ, ಸಹಜವಾಗಿ, ಸರಕು ಸಾಗಾಣಿಕೆ ಮೇಲೆ ಹೊಡೆತ ಬೀಳುವುದರಿಂದ, ದಿನನಿತ್ಯದ ಬಳಕೆ ವಸ್ತುಗಳ ಬೆಲೆ ದುಬಾರಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ಪ್ರಧಾನ ಮಂತ್ರಿಗಳು ಸ್ವಾವಲಂಬಿ ಬದುಕು, ಸಾಗಿಸಬೇಕೆಂದು ಹೇಳುತ್ತಾ, ಶ್ರೀಸಾಮಾನ್ಯನ ಮೇಲೆ ಹೊರೆ ಹೇರುತ್ತಿರುವುದು ಎಷ್ಟು ಸರಿ ಎಂದು ಕಾಂಗ್ರೆಸ್ಸಿಗರು ಪ್ರಶ್ನಿಸಿದ್ದಾರೆ. ಕೂಡಲೇ, ಪ್ರಧಾನಮಂತ್ರಿಗಳು, ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ಇಳಿಕೆ ಮಾಡಿ ದೇಶದ ಜನರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on
on